
ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಸಹಯೋಗದಲ್ಲಿ ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ಬಿ.ಸಿ.ರೊಡಿನ ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಶುಕ್ರವಾರ ಸರ್ವಜ್ಞ ಜಯಂತಿ ಆಚರಣೆ ನಡೆಯಿತು.

ಫರಂಗಿಪೇಟೆ ಅರ್ಕುಳದ ಶ್ರೀರಾಮವಿದ್ಯಾಸಂಸ್ಥೆಗಳ ಮುಖ್ಯಸ್ಥರಾದ ದೇವದಾಸ್ ಕೊಡ್ಮಾನ್ ಈ ಸಂದರ್ಭ ಉಪನ್ಯಾಸ ನೀಡಿ, ಸರ್ವಜ್ಞನ ಜೀವನಚರಿತ್ರೆಯನ್ನು ವಿವರಿಸಿದರು. ಸರ್ವಜ್ಞನ ಸಂದೇಶಗಳು ಸಾರ್ವಕಾಲಿಕವಾಗಿ ಪ್ರಸ್ತುತವಾಗಿದೆ ಎಂದವರು ಹೇಳಿದರು.
ಅಧ್ಯಕ್ಷತೆಯನ್ನು ತಹಸೀಲ್ದಾರ್ ಮಂಜುನಾಥ್ ವಹಿಸಿ ಮಾತನಾಡಿ ಭವಿಷ್ಯದಲ್ಲಿ ಇನ್ನಷ್ಟು ವಿಸ್ತಾರವಾಗಿ ಕಾರ್ಯಕ್ರಮಗಳನ್ನು ಆಯೋಜಿಸುವುದಾಗಿ ಭರವಸೆ ನೀಡಿದರು. ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದರ್ ಮಾತನಾಡಿ, ನಾಲ್ಕು ಗೋಡೆಗಳ ಮಧ್ಯೆ ನಡೆಸುವ ಬದಲು ಎಲ್ಲರನ್ನೂ ಒಗ್ಗೂಡಿಸಿ ಕಾರ್ಯಕ್ರಮ ನಡೆಸುವಂತೆ ಸಲಹೆ ನೀಡಿದರು.
ರಕ್ತೇಶ್ವರಿಯಿಂದ ಕೈಕುಂಜದವರೆಗೆ ಸರ್ವಜ್ಞ ರಸ್ತೆ ಎಂದು ನಾಮಕರಣ ಮಾಡಬೇಕು ಎಂದು ಬುಡಾ ಅಧ್ಯಕ್ಷರ ಬಳಿ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ವಿಭಾಗೀಯ ಅಧ್ಯಕ್ಷ ಸುಕುಮಾರ್ ಬಂಟ್ವಾಳ ಮನವಿ ಮಾಡಿದರು. ಬಂಟ್ವಾಳ ತಾಲೂಕು ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶೇಷಪ್ಪ ಮಾಸ್ತರ್ ಶುಭ ಹಾರೈಸಿದರು.
ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಅಧ್ಯಕ್ಷ ರಮೇಶ್ ಸಾಲ್ಯಾನ್ ಸಂಚಯಗಿರಿ, ರಾಜ್ಯ ಕುಲಾಲರ ಕುಂಬಾರರ ಮಹಿಳಾ ಸಂಘದ ಬಂಟ್ವಾಳ ಅಧ್ಯಕ್ಷೆ ವಸಂತಿ ಭೋಜ ಸಾಲ್ಯಾನ್, ಕುಲಾಲ ಯುವ ವೇದಿಕೆ ಬಂಟ್ವಾಳ ಅಧ್ಯಕ್ಷ ಸುಮಿತ್ ಸಾಲ್ಯಾನ್ ಸೊರ್ನಾಡ್, ಮಹಿಳಾ ಸಂಚಾಲಕಿ ದುರ್ಗಾಶ್ರೀ ಪ್ರದೀಪ್, ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕುಲಾಲ್ ಪಂಜಿಕಲ್ಲು, ವಿವಿ ಸಿಂಡಿಕೇಟ್ ಸದಸ್ಯ ಸುರೇಶ್ ನಾವೂರು, ಬುಡಾ ಸದಸ್ಯ ಮನೋಹರ ನೇರಂಬೋಳು, ಕೇಂದ್ರ ಸ್ಥಾನಿಯ ಉಪತಹಸೀಲ್ದಾರ್ ನರೇಂದ್ರ ನಾಥ್ ಮಿತ್ತೂರು, ಉಪತಹಸೀಲ್ದಾರ್ ದಿವಾಕರ ಮುಗುಳಿಯ,ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್ ಉಪಸ್ಥಿತರಿದ್ದರು. ಗ್ರಾಮ ಸಹಾಯಕ ಜನಾರ್ದನ ಸ್ವಾಗತಿಸಿದರು. ಸುಕುಮಾರ್ ಬಂಟ್ವಾಳ ವಂದಿಸಿದರು. ಉಪತಹಸೀಲ್ದಾರ್ ನವೀನ್ ಕುಮಾರ್ ಬೆಂಜನಪದವು ಕಾರ್ಯಕ್ರಮ ನಿರ್ವಹಿಸಿದರು.


Be the first to comment on "Bantwal: ತಾಲೂಕು ಮಟ್ಟದ ಸರ್ವಜ್ಞ ಜಯಂತಿ ಆಚರಣೆ"