ಬಂಟ್ವಾಳ

ಸರಕಾರಿ ಪಾಲಿಟೆಕ್ನಿಕ್ ನಲ್ಲಿ ಜೀವನ ಕೌಶಲ್ಯ, ವೃತ್ತಿ ಮಾರ್ಗದರ್ಶನ

ಬಂಟ್ವಾಳದ ಸರಕಾರಿ ಪಾಲಿಟೆಕ್ನಿಕ್, ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್) ಹಾಗೂ ರೆಡ್ ಕ್ರಾಸ್ ಘಟಕಗಳ ವತಿಯಿಂದ ಜೀವನ ಕೌಶಲ್ಯಗಳು ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಆಯೋಜಿಸಲಾಯಿತು.

www.flylinkworld.com

ಜಿಲ್ಲಾ ತರಬೇತುದಾರರಾದ ಶ್ರೀಕಾಂತ್ ಪೂಜಾರಿ ಬಿರಾವು ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಚಟುವಟಿಕೆಗಳ ಮೂಲಕ ತರಬೇತಿ ನೀಡಿದರು. ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಹೊಂದಿರಬೇಕಾದ ಸಂವಹನ ಕೌಶಲ್ಯ, ಸಮಯ ನಿರ್ವಹಣೆ, ಆತ್ಮವಿಶ್ವಾಸ, ನಾಯಕತ್ವ ಗುಣಗಳು ಹಾಗೂ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯಗಳ ಮಹತ್ವವನ್ನು ವಿವರಿಸಿದರು. ಜೊತೆಗೆ ವಿವಿಧ ವೃತ್ತಿ ಅವಕಾಶಗಳು ಹಾಗೂ ಭವಿಷ್ಯ ರೂಪಿಸಿಕೊಳ್ಳುವ ಮಾರ್ಗಗಳ ಕುರಿತು ಮಾರ್ಗದರ್ಶನ ನೀಡಿದರು.

ಅಧ್ಯಕ್ಷತೆ ಸಂಸ್ಥೆಯ ಪ್ರಿನ್ಸಿಪಾಲ್ ನರಸಿಂಹ ಭಟ್ ಎಚ್ ವಹಿಸಿ, ಜೀವನ ಕೌಶಲ್ಯಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ಪ್ರಮುಖ ಪಾತ್ರವಹಿಸುತ್ತವೆ ಎಂದು ತಿಳಿಸಿದರು. ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಭಾಸ್ಕರ ಎಲ್ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮದ ಉದ್ದೇಶ ಮತ್ತು ಮಹತ್ವವನ್ನು ವಿವರಿಸಿದರು. ರೆಡ್ ಕ್ರಾಸ್ ಸಂಯೋಜಕ ಉದಯ ಕುಮಾರ್, ಪ್ರೇರಣಾ ಸಂಯೋಜಕಿ ರಿತಿಕಾ ಕೋಟ್ಯಾನ್ ಎಚ್ ಉಪಸ್ಥಿತರಿದ್ದರು. ಎನ್ನೆಸ್ಸೆಸ್ ಸ್ವಯಂಸೇವಕಿ ಅನನ್ಯ ಸ್ವಾಗತಿಸಿದರು. ವಿಕ್ರಮ್ ಕಾರ್ಯಕ್ರಮ ನಿರೂಪಿಸಿ, ದೀಕ್ಷಿತ್ ವಂದಿಸಿದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.