ಸ್ವಾತಂತ್ರ್ಯ ಯೋಧ ಡಾ.‌ಅಮ್ಮೆಂಬಳ ಬಾಳಪ್ಪ ರಸ್ತೆ ನಾಮಕರಣ

ಪೊಸಳ್ಳಿ, ದೈಪಲ, ಕಾಮಾಜೆ, ಕುಲಾಲರಮಠ ಸಂಪರ್ಕ ರಸ್ತೆಗೆ ಡಾ.ಬಾಳಪ್ಪ ಹೆಸರು; ಅಭಿವೃದ್ಧಿಗೆ ನೆರವು: ಶಾಸಕ ರಾಜೇಶ್ ನಾಯ್ಕ್

www.flylinkworld.com

ಬಿ.ಸಿ.ರೋಡಿನ ನಾರಾಯಣ ಗುರು ವೃತ್ತದ ಬಳಿಯಿಂದ ಪೊಸಳ್ಳಿ, ದೈಪಲ, ಕಾಮಾಜೆ, ಕುಲಾಲರ ಮಠ ಸಂಪರ್ಕ ರಸ್ತೆಗೆ ಸ್ವಾತಂತ್ರ್ಯಯೋಧ ಡಾ.‌ಅಮ್ಮೆಂಬಳ ಬಾಳಪ್ಪ ರಸ್ತೆ ಎಂಬ ನಾಮಕರಣದ ಫಲಕ ಅನಾವರಣ ಕಾರ್ಯಕ್ರಮ ಅವರ 104 ನೇ ಜನ್ಮದಿನದ ಅಂಗವಾಗಿ ಸೋಮವಾರ ನಡೆಯಿತು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ನಾಮಫಲಕ ಅನಾವರಣಗೊಳಿಸಿ ಮಾತನಾಡಿ, ರಸ್ತೆ ಅಭಿವೃದ್ಧಿಗೆ ತನ್ನ ಶಾಸಕರ ನಿಧಿಯಿಂದ ಅನುದಾನ ಒದಗಿಸುವುದಾಗಿ ಹೇಳಿದರು. ನಾಮಫಲಕ ಅನಾವರಣಗೊಳಿಸಿದ ನಂತರ ಜವಾಬ್ದಾರಿ ಹೆಚ್ಚುತ್ತದೆ, ರಸ್ತೆಯನ್ನು ಇನ್ನಷ್ಟು ಅಭಿವೃದ್ಧಿಗೊಳಿಸಿ,ಅದನ್ನು ಸುವ್ಯವಸ್ಥಿತವಾಗಿ ನಿರ್ವಹಿಸಿದರೆ, ಹೆಸರಿಟ್ಟದ್ದು ಸಾರ್ಥಕವಾಗುತ್ತದೆ ಎಂದರು.

ಜಾಹೀರಾತು
Dr. Ammembala Balappa Memorial Road

ಬಿಎಸ್ ಎಫ್ ನಿವೃತ್ತ ಕಮಾಂಡರ್ ಚಂದಪ್ಪ ಮೂಲ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಅಮ್ಮೆಂಬಳ ಬಾಳಪ್ಪ ಅವರ ಹೆಸರು ಚಿರಸ್ಥಾಯಗೊಳಿಸುವ ನಿಟ್ಟಿನಲ್ಲಿ ಶಾಶ್ವತವಾದ ಕೆಲಸ ಆಗಬೇಕಿದ್ದು ಪ್ರಸ್ತುತ ದಿನಗಳಲ್ಲಿ ಹಂತಹಂತವಾಗಿ ನಡೆಯುತ್ತಿದೆ ಎಂದರು.

ಬಂಟ್ವಾಳ ನಗರ ಯೋಜನ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದರ್ ಶುಭ ಹಾರೈಸಿದರು. ಬಂಟ್ವಾಳ  ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷ ರಮೇಶ್ ಸಾಲ್ಯಾನ್ ಸಂಚಯಗಿರಿ ಅಧ್ಯಕ್ಷತೆ ವಹಿಸಿದ್ದರು.

ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಸುರೇಶ್ ಕುಮಾರ್ ನಾವೂರು, ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಸಮಾಜ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ಕುಲಾಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ಯಾದವ ಕುಲಾಲ್ ಅಗ್ರಬೈಲು ಸ್ವಾಗತಿಸಿದರು, ಸದಸ್ಯ ಮಚ್ಚೇಂದ್ರ ಸಾಲ್ಯಾನ್ ವಂದಿಸಿದರು, ಕಟ್ಟಡ ಸಮಿತಿ ಗೌರವಾಧ್ಯಕ್ಷ ನಾರಾಯಣ ಸಿ.‌ಪೆರ್ನೆ ಕಾರ್ಯಕ್ರಮ ನಿರೂಪಿಸಿದರು. ಬೂಡಾ ಸದಸ್ಯ ಮನೋಹರ ನೇರಂಬೋಳು, ಕಟ್ಟಡ ಸಮಿತಿ ಜತೆಕಾರ್ಯದರ್ಶಿ ಲಕ್ಷ್ಮಣ ಅಗ್ರಬೈಲು, ಸಿವಿಲ್ ಇಂಜಿನಿಯರ್ ಸತೀಶ್ ಕುಲಾಲ್, ಸ್ಥಳೀಯರಾದ ಜನಾರ್ಧನ ಪೊಸಳ್ಳಿ ಕಾರ್ಯಕ್ರಮಕ್ಕೆ ಸಹಕರಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಸ್ವಾತಂತ್ರ್ಯ ಯೋಧ ಡಾ.‌ಅಮ್ಮೆಂಬಳ ಬಾಳಪ್ಪ ರಸ್ತೆ ನಾಮಕರಣ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*