ಗೌಡ ಸಾರಸ್ವತ ಸಮಾಜದ ಆಡಳಿತಕ್ಕೊಳಪಟ್ಟ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮೀ ದೇವಸ್ಥಾನದಲ್ಲಿ ಈಗಾಗಲೇ ಫೆ.20ರಿಂದ ಬ್ರಹ್ಮರಥೋತ್ಸವ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಮಂಗಳವಾರ ಸಂಜೆ ಬ್ರಹ್ಮರಥೋತ್ಸವ ನಡೆಯಲಿದೆ.
ವಿಶ್ವಾವಸು ನಾಮ ಸಂವತ್ಸರದ ಫಾಲ್ಗುಣ ಶುದ್ಧ ತದಿಗೆ ಫೆ.20ರ ಶುಕ್ರವಾರದಿಂದ ಫಾಲ್ಗುಣ ಶುದ್ಧ ನವಮಿ ಫೆ.25ರ ಬುಧವಾರದ ತನಕ ನಡೆಯುವ 202ನೇ ವರ್ಷದ ಬ್ರಹ್ಮರಥೋತ್ಸವ ಹಿನ್ನೆಲೆ ಕಳೆದ ಗುರುವಾರ ಶ್ರೀ ದೇವರ ಮೃತ್ತಿಕಾರೋಹಣ, ಶುಕ್ರವಾರ ಧ್ವಜಾರೋಹಣ, ಬೆಳ್ಳಿ ಪಾಲ್ಕಿ ಹಗಲೋತ್ಸವ, ಗರುಡೋತ್ಸವ, ಶನಿವಾರ ಬೆಳ್ಳಿ ಪಾಲ್ಕಿ ಹಗಲೋತ್ಸವ, ಹನುಮಂತೋತ್ಸವ, ಭಾನುವಾರ ಬೆಳ್ಳಿ ಲಾಲ್ಕಿ ಹಗಲೋತ್ಸವ, ಚಂದ್ರಮಂಡಲ ಉತ್ಸವ ನಡೆಯಿತು.
ಸೋಮವಾರ ಶ್ರೀ ದೇವರ ಮೂಲ ಪ್ರತಿಷ್ಠಾ ವರ್ದಂತಿ, ಪಟ್ಟದ ದೇವರಿಗೆ ಸ್ವರ್ಣ ಪೀಠ ಸಮರ್ಪಣೆ ಕಾರ್ಯಕ್ರಮ, ಬೆಳ್ಳಿ ಪಾಲ್ಕಿ ಹಗಲೋತ್ಸವ,ಜಲ ಕ್ರೀಡೆ, ಗೋಪುರೋತ್ಸವ, ಬೆಳ್ಳಿ ಲಾಲ್ಕಿ ಉತ್ಸವ, ಬೆಳ್ಳಿ ರಥೋತ್ಸವ ನಡೆಯಿತು.
ಮಂಗಳವಾರ ಬ್ರಹ್ಮ ರಥೋತ್ಸವ ನಡೆಯಲಿದ್ದು, ಬುಧವಾರ ಅವಭೃತ ಉತ್ಸವ, ಧ್ವಜಾವರೋಹಣ ನಡೆಯಲಿದೆ
ಅಮೀಬಾ ಸೋಂಕಿನಿಂದ ಸಾವು ಸಂಭವಿಸಿಲ್ಲ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ (more…)