ಬಂಟ್ವಾಳ

ಬಂಟ್ವಾಳ: ಸಾರಿ ಗೊಂಡೆ, ಫೋಲ್ಡಿಂಗ್ ತರಬೇತಿ

ಬಂಟ್ವಾಳ ಯೋಜನಾ ಕಚೇರಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಬಂಟ್ವಾಳ ಹಾಗೂ ಬೆಳ್ತಂಗಡಿಯ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರ ವತಿಯಿಂದ ಸಾರಿ ಗೊಂಡೆ ಹಾಗು ಫೋಲ್ಡಿಂಗ್ ತರಬೇತಿ ಉದ್ಘಾಟನೆ ನಡೆಯಿತು.

www.flylinkworld.com

ಯೋಜನೆಯ ಸ್ವಸಹಾಯ ಸಂಘದ ಸದಸ್ಯರಿಗೆ ಮತ್ತು ಅವರ ಕುಟುಂಬದ ಸದಸ್ಯರಿಗೆ ಐದು ದಿನಗಳ ಕಾಲ  ಉಚಿತವಾಗಿ ತರಬೇತಿ ನೀಡಲಾಗುತ್ತಿದೆ. ಜಿಲ್ಲಾ ನಿರ್ದೇಶಕ ಡಿ. ದಿನೇಶ್  ಪೂಜಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮಾಜಕ್ಕೆ ಉತ್ತಮ ಸೇವೆ ನೀಡುತ್ತಿದೆ ಎಂದರು. ಗ್ರಾಮೀಣ ಶ್ರೇಷ್ಠತಾ ಕೇಂದ್ರದ  ಉಪನ್ಯಾಸಕಿ ಧರಣಿ ಉಪಸ್ಥಿತರಿದ್ದರು.

ತಾಲೂಕಿನ ಯೋಜನಾಧಿಕಾರಿ ಜಯಾನಂದ ಪಿ, ತರಬೇತಿ ಶಿಕ್ಷಕಿ ವಿಜಯ, ಕೋಣಾಜೆ ಒಕ್ಕೂಟದ ವಲಯ ಅಧ್ಯಕ್ಷ ರವಿ ಉಪಸ್ಥಿತರಿದ್ದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಸವಿತಾ ಕಾರ್ಯಕ್ರಮ ನಿರ್ವಹಿಸಿದರು. ಸೇವಾಪ್ರತಿನಿಧಿ ಉಷಾ ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಸ್ವಾತಂತ್ರ್ಯ ಯೋಧ ಡಾ.‌ಅಮ್ಮೆಂಬಳ ಬಾಳಪ್ಪ ರಸ್ತೆ ನಾಮಕರಣ

ಪೊಸಳ್ಳಿ, ದೈಪಲ, ಕಾಮಾಜೆ, ಕುಲಾಲರಮಠ ಸಂಪರ್ಕ ರಸ್ತೆಗೆ ಡಾ.ಬಾಳಪ್ಪ ಹೆಸರು; ಅಭಿವೃದ್ಧಿಗೆ ನೆರವು: ಶಾಸಕ ರಾಜೇಶ್ ನಾಯ್ಕ್ (more…)

11 hours ago