Uncategorized

ರಸ್ತೆ ಅಭಿವೃದ್ಧಿಗೆ ಕುಲಾಲ ಸುಧಾರಕ ಸಂಘದ ಪದಾಧಿಕಾರಿಗಳ ಮನವಿ

ದೇಶಭಕ್ತ ಸ್ವಾತಂತ್ರ್ಯ ಹೋರಾಟಗಾರರಾದ ಡಾ. ಅಮ್ಮೆಂಬಳ ಬಾಳಪ್ಪ ಅವರ ಹೆಸರಿನಲ್ಲಿ ನಾಮಕರಣಗೊಂಡಿರುವ ರಸ್ತೆ ಪೊಸಳ್ಳಿ, ದೈಪಲ, ಕಾಮಾಜೆ ಹಾಗೂ ಕುಲಾಲ ಮಠ ಗ್ರಾಮಗಳ ಮೂಲಕ ಹಾದು ಹೋಗುತ್ತಿದ್ದು, ಇದರ ಅಭಿವೃದ್ಧಿಗಾಗಿ ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

www.flylinkworld.com

ಮಂಗಳವಾರ ಬಿ.ಸಿ.ರೋಡಿನ ಶಾಸಕರ ಕಚೇರಿಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಶಾಸಕ ರಾಜೇಶ್ ನಾಯಕ್ ಯು. ಅವರಿಗೆ ಮನವಿ ಪತ್ರ ನೀಡಲಾಯಿತು. ರಸ್ತೆ ಅಭಿವೃದ್ಧಿ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ರಸ್ತೆ ಅಭಿವೃದ್ಧಿಯಾದರೆ ಗ್ರಾಮವೂ ಅಭಿವೃದ್ಧಿಯಾಗುತ್ತದೆ. ಇದರಿಂದ ಈ ಭಾಗದ ಗ್ರಾಮಸ್ಥರಿಗೆ ಸಂಚಾರ ಸುಗಮವಾಗಿ ವಿವಿಧ ಮೂಲಭೂತ ಸೌಕರ್ಯಗಳು ಸುಧಾರಣೆಯಾಗಲಿವೆ. ಆದಷ್ಟು ಬೇಗ ರಸ್ತೆ ಅಭಿವೃದ್ಧಿಗೆ ಯೋಜನೆ ರೂಪಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭ ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷ ಬಿ. ರಮೇಶ್ ಸಾಲ್ಯಾನ್ ಸಂಚಯಗಿರಿ, ಪ್ರಧಾನ ಕಾರ್ಯದರ್ಶಿ ಯಾದವ ಕುಲಾಲ್ ಅಗ್ರಬೈಲು, ಕಾರ್ಯಕಾರಿ ಸಮಿತಿ ಸದಸ್ಯ ಮಚೇಂದ್ರ ಸಾಲ್ಯಾನ್ ಹಾಗೂ ಮಾಜಿ ಅಧ್ಯಕ್ಷ ಸತೀಶ್ ಕುಲಾಲ್ ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಾ.1ರಂದು ಬಂಟ್ವಾಳದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ದಿವ್ಯಾಂಗ ಸಮ್ಮೇಳನ

ಬಂಟ್ವಾಳ: ಸಕ್ಷಮ ದಕ್ಷಿಣ ಕನ್ನಡ ಜಿಲ್ಲಾ ಘಟಕ ಮಂಗಳೂರು ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ದಿವ್ಯಾಂಗ ಸಮ್ಮೇಳನ ಬಿ.ಸಿ.ರೋಡಿನ ಡಾ.…

12 hours ago