ಬಂಟ್ವಾಳ ಫೆ.28 ರ ಶನಿವಾರ ಬಿ.ಸಿ.ರೋಡಿನ ಅಲೆತ್ತೂರಿನಲ್ಲಿ ಮಂಗಳ ಫ್ರೆಂಡ್ಸ್ ಸರ್ಕಲ್ (ರಿ) ಇದರ 27 ನೇ ವರ್ಷದ ಸಾರ್ವಜನಿಕ ಶನೈಶ್ಚರ ಪೂಜೆ ಹಾಗೂ 44 ನೇ ವರ್ಷದ ವಾರ್ಷಿಕೋತ್ಸವ ನಡೆಯಲಿರುವುದು.
ಸಂಜೆ ಗಂಟೆ 5.30ರಿಂದ ಶನಿಪೂಜೆ ಪ್ರಾರಂಭ ರಾತ್ರಿ ಗಂಟೆ 7.30ಕ್ಕೆ, ಮಂಗಳಾರತಿ, ಪ್ರಸಾದ ವಿತರಣೆ, ಹಾಗೂ ಅನ್ನಸಂತರ್ಪಣೆ
ರಾತ್ರಿ ಗಂಟೆ 8.00 ಕ್ಕೆ ಸಭಾ ಕಾರ್ಯಕ್ರಮ, ರಾತ್ರಿ ಗಂಟೆ 8.30 ರಿಂದ ಸ್ಥಳೀಯ ಪ್ರತಿಭೆಗಳಿಂದ ನೃತ್ಯ ಕಾರ್ಯಕ್ರಮ, ಹಾಗೂ ಸಭಾ ಕಾರ್ಯಕ್ರಮ, ರಾತ್ರಿ ಗಂಟೆ 10.00 ರಿಂದ ಅಮ್ಮ ಕಲಾವಿದರು ಕುಡ್ಲ ಇವರಿಂದ ತುಳು ಹಾಸ್ಯಮಯ ನಾಟಕ, ಆನ್ ಮಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.