ಬಂಟ್ವಾಳ

ಸಂಸ್ಕಾರಯುತ ಶಿಕ್ಷಣಕ್ಕೆ ಒತ್ತು ನೀಡಿದ ಬ್ರಹ್ಮಶ್ರೀ ನಾರಾಯಣಗುರುಗಳು: ಮಧುಸೂಧನ ಸುವರ್ಣ

“ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಿಷ್ಠರಾಗಿ” ಎಂಬ ಮಂತ್ರದೊಂದಿಗೆ ಸಂಸ್ಕಾರಯುತ ಶಿಕ್ಷಣಕ್ಕೆ ಒತ್ತು ನೀಡಿದ ಬ್ರಹ್ಮಶ್ರೀ ನಾರಾಯಣ ಗುರುಗಳು, ಮಾನವ ಕುಲದ ಸಂಘಟನೆಯೇ ಬಲಿಷ್ಠ ಸಮಾಜದ ಅಡಿಪಾಯವೆಂದು ಸಾರಿದರು ಎಂದು ಶಿಕ್ಷಕ ಮಧುಸೂದನ್ ಸುವರ್ಣ ತಿಳಿಸಿದರು.

www.flylinkworld.com

ನರಿಕೊಂಬು ಮೊಗರ್ನಾಡು ವಿವೇಕಪುರದ ರಂಜಿತ್ ಪೂಜಾರಿ ಅವರ ‘ಬೃಂದಾವನ’ ನಿವಾಸದಲ್ಲಿ ನಡೆದ ‘ಗುರುತತ್ವವಾಹಿನಿ ಭಜನಾ ಸಂಕೀರ್ತನೆ-68’ ಕಾರ್ಯಕ್ರಮದಲ್ಲಿ ಗುರುಸಂದೇಶ ನೀಡಿದರು. ಆಧ್ಯಾತ್ಮಿಕ ಚಿಂತನೆ, ಸಾಮಾಜಿಕ ಸಮಾನತೆ ಮತ್ತು ಶೈಕ್ಷಣಿಕ ಪ್ರಗತಿಯ ಮೂಲಕ ಸಮಾಜದಲ್ಲಿ ಮಹತ್ತರ ಬದಲಾವಣೆ ತಂದ ಗುರುಗಳು, “ಜಾತಿ ಒಂದೇ, ಮತ ಒಂದೇ, ದೇವರು ಒಬ್ಬನೇ” ಎಂಬ ಮಾನವತಾವಾದದ ಮೂಲಕ ಕ್ರಾಂತಿ ಮಾಡಿದರು. ಅಸ್ಪೃಶ್ಯತೆ ಮತ್ತು ಅಂಧಶ್ರದ್ಧೆ ತೊಡೆದುಹಾಕಲು ಅವರು ನಡೆಸಿದ ಈ ತ್ರಿವಿಧ ಕ್ರಾಂತಿ ಇಂದಿಗೂ ಮನುಕುಲದ ಏಳಿಗೆಗೆ ದಾರಿದೀಪವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಈ ಸಂದರ್ಭ ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು, ಕಾರ್ಯದರ್ಶಿ ಮಧುಸೂದನ್ ಮದ್ವ, ಉಪಾಧ್ಯಕ್ಷ ನಿಕೇಶ್ ಕೋಟ್ಯಾನ್, ಹಾಗೂ ಸಲಹೆಗಾರರಾದ ರಾಮಚಂದ್ರ ಸುವರ್ಣ ತುಂಬೆ, ಮಾಜಿ ಅಧ್ಯಕ್ಷರು ನಿರ್ದೇಶಕರು ಸದಸ್ಯರು  ಉಪಸ್ಥಿತರಿದ್ದರು.ಯುವವಾಹಿನಿ ಬಂಟ್ವಾಳ ಘಟಕದ ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಹರೀಶ್ ಸಾಲ್ಯಾನ್ ಅಜೆಕಲ ಧನ್ಯವಾದ ಅರ್ಪಿಸಿದರು. ಸಮಾಜ ಸೇವಾ ನಿರ್ದೇಶಕ ಪ್ರಜಿತ್ ಅಮೀನ್ ಏರಮಲೆ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts