ದಕ್ಷಿಣ ಕನ್ನಡ ಜಿಲ್ಲಾ ಟೋಲ್ ವಿರೋಧಿ ಸಮಿತಿ ಅಸ್ತಿತ್ವಕ್ಕೆ    

www.flylinkworld.com

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸತಾಗಿ ರಚನೆ ಆಗುವ ಟೋಲ್ ಗೇಟ್ ಗಳ ವಿರುದ್ಧ ಹಾಗೂ ಬ್ರಹ್ಮರಕೂಟ್ಲು ಟೋಲ್ ಗೇಟ್ ಅನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಟೋಲ್ ವಿರೋಧಿ ಸಮಿತಿಯೊಂದು ಅಸ್ತಿತ್ವಕ್ಕೆ ಬಂದಿದೆ.

ಕಾಂಗ್ರೆಸ್, ಎಸ್ಡಿಪಿಐ ,ಜೆಡಿಎಸ್ ಪಕ್ಷಗಳ ಮುಖಂಡರು ಮತ್ತು ಹಲವು ಸಂಘಟನೆಗಳ ಮುಖಂಡರುಗಳು ಬಿ.ಸಿ.ರೋಡಿನ ರಿಕ್ಷಾ ಭವನದಲ್ಲಿ ಸಭೆ ಸೇರಿ ಸಮಿತಿ ರಚಿಸಿದ್ದಾರೆ. ಬ್ರಹ್ಮರಕೊಟ್ಲು ಟೋಲ್ ಪ್ಲಾಜಾ ಕಳೆದ 13 ವರ್ಷಗಳಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮಗಳ ವಿರುದ್ಧವಾಗಿ ಟೋಲ್ ಸಂಗ್ರಹಿಸುತ್ತಿರುವುದಾಗಿ ಆರೋಪಿಸಿರುವ ಸಮಿತಿ, ಟೋಲ್ ಅನ್ನು ಶಾಶ್ವತವಾಗಿ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದೆ. ಸಮಿತಿ ಸಂಚಾಲಕರಾಗಿ ಸುಹೇಲ್ ಕಂದಕ್, ಅನ್ವರ್ ಸಾದತ್ ಬಜತ್ತೂರು ಹಾಗೂ ಎಂ ಎಸ್ ಮಹಮ್ಮದ್ ಅವರನ್ನು ಆಯ್ಕೆ ಮಾಡಲಾಗಿದೆ. ಸಮಿತಿ ಸದಸ್ಯರಾಗಿ ಹನೀಫ್ ಖಾನ್ ಕೊಡಾಜೆ, ಧನುರಾಜ್ ಪೂಜಾರಿ,ಅಶ್ರಫ್ ಕಲ್ಲೇಗ, ಲತೀಫ್ ಅರಫಾ, ಮೂನಿಶ್ ಅಲಿ, ಇಕ್ಬಾಲ್ ಐಎಮ್ಆರ್, ಶಾಹುಲ್ ಎಸ್ ಎಚ್, ಇಮ್ರಾನ್ ಪಿ ಜೆ, ನಾಸಿರ್, ವಿನಯ ಕುಮಾರ್, ಹಿಸ್ರರ್, ಸತ್ತಾರ್, ಸವಾಝ್ ಬಂಟ್ವಾಳ, ಶಾಕಿರ್ ಅವರನ್ನು ಸಭೆ ಆಯ್ಕೆ ಮಾಡಿತು. ಐಎಂಆರ್ ಇಕ್ಬಾಲ್ ಸ್ವಾಗತಿಸಿದರು. ಸವಾಲ್ ಬಂಟ್ವಾಳ ವಂದಿಸಿದರು.

ಜಾಹೀರಾತು
ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ದಕ್ಷಿಣ ಕನ್ನಡ ಜಿಲ್ಲಾ ಟೋಲ್ ವಿರೋಧಿ ಸಮಿತಿ ಅಸ್ತಿತ್ವಕ್ಕೆ    "

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*