ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿ ಸೇವಾ ಸಮಿತಿ ಅಧ್ಯಕ್ಷರಾಗಿ ಬಿ.ಮೋಹನ್ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಬಿ.ವಿಶ್ವನಾಥ್ ಅಧ್ಯಕ್ಷತೆಯಲ್ಲಿ ನಡೆದ ತ್ರೈವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆಯನ್ನು ಮಾಡಲಾಯಿತು.
ಮುಂದಿನ ಮೂರು ವರ್ಷದ ಅವಧಿಗೆ ಆಡಳಿತ ಮಂಡಳಿಯ ಪದಾಧಿಕಾರಿಗಳು ಆಯ್ಕೆಗೊಂಡರು. ಸೇವಾ ಸಮಿತಿ ಅಧ್ಯಕ್ಷರಾಗಿ ಬಿ.ಮೋಹನ್, ಉಪಾಧ್ಯಕ್ಷರಾಗಿ ಸಂಜೀವ ಪೂಜಾರಿ (ಗುರುಕೃಪಾ), ಪ್ರಧಾನ ಕಾರ್ಯದರ್ಶಿಯಾಗಿ ಎನ್.ಶಿವಶಂಕರ್, ಕೋಶಾಧಿಕಾರಿಯಾಗಿ ರಾಜೇಶ್.ಎಲ್.ನಾಯಕ್, ಜತೆ ಕಾರ್ಯದರ್ಶಿಯಾಗಿ ಸತೀಶ್ ಕುಮಾರ್ ಆಯ್ಕೆಯಾಗಿದ್ದಾರೆ. ಇತರ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.
| ಹೋರಾಟಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಟೋಲ್ ವಿರೋಧಿ ಹೋರಾಟ ಸಮಿತಿ ಬೆಂಬಲ --- NEWS WITH VIDEO (more…)