ಕನ್ನಡ ಸಾಹಿತ್ಯದಲ್ಲಿ ರಾಷ್ಟ್ರಭಾವದ ಪ್ರತಿಬಿಂಬ ಎಂಬ ರಾಷ್ಟ್ರೀಯ ವಿಚಾರಸಂಕಿರಣ ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಸೋಮವಾರ ನಡೆಯಿತು.

ಕನ್ನಡ ವಿಭಾಗದ ವತಿಯಿಂದ ಐಕ್ಯೂಎಸಿ ಸಹಯೋಗದಲ್ಲಿ ನಡೆದ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಪ್ರತಿಯೊಬ್ಬ ಪ್ರಜೆಯಲ್ಲೂ ರಾಷ್ಟ್ರೀಯಭಾವ ಜಾಗೃತವಾದಾಗ ಪುನರುತ್ಥಾನ ಸಾಧ್ಯ ಎಂದರು.

ಚಿಂತಕ ಡಾ. ಪಾವಗಡ ಪ್ರಕಾಶ್ ರಾವ್ ಮತ್ತು ಅವರ ಪತ್ನಿ ಕಲ್ಪನಾ ರಾನಡೆ ವಿಚಾರಸಂಕಿರಣವನ್ನು ಉದ್ಘಾಟಿಸಿದರು. ಮೊದಲ ಗೋಷ್ಠಿಯಲ್ಲಿ ಡಾ. ಪಾವಗಡ ಪ್ರಕಾಶ್, ರಾಮ ಮತ್ತು ರಾಷ್ಟ್ರದ ಪರಿಕಲ್ಪನೆಯನ್ನು ವಿವರಿಸಿದರು.

ಕನ್ನಡ ವಿಭಾಗ ಮುಖ್ಯಸ್ಥರೂ, ಉಪಪ್ರಾಂಶುಪಾಲರಾದ ಯತಿರಾಜ್ ಪೆರಾಜೆ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಕಾರ್ಯಕ್ರಮದ ಪ್ರಾಯೋಜಕತ್ವ ವಹಿಸಿ ವೇದಿಕೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಲಬುರ್ಗಿ ಕೇಂದ್ರೀಯ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ರೋಹಿಣಾಕ್ಷ ಶಿರ್ಲಾಲು, ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾಲೇಜು ಪ್ರಾಚಾರ್ಯ ಕೃಷ್ಣಪ್ರಸಾದ್ ಕಾಯರ್‌ಕಟ್ಟೆ ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗ ವಿದ್ಯಾರ್ಥಿನಿ ಪ್ರಣಮ್ಯ ವಂದಿಸಿದರು. ತನುಶ್ರೀ ಕಾರ್ಯಕ್ರಮ ನಿರೂಪಿಸಿದರು. ಎರಡನೇ ಗೋಷ್ಠಿಯಲ್ಲಿ ಡಾ. ರೋಹಿಣಾಕ್ಷ ಶಿರ್ಲಾಲು ಕನ್ನಡ ಸಾಹಿತ್ಯದಲ್ಲಿ ರಾಷ್ಟ್ರೀಯ ಪ್ರಜ್ಞೆ ಎಂಬ ವಿಚಾರ ಮಂಡಿಸಿದರು.


Be the first to comment on "ಕನ್ನಡ ಸಾಹಿತ್ಯದಲ್ಲಿ ರಾಷ್ಟ್ರಭಾವದ ಪ್ರತಿಬಿಂಬ: ರಾಷ್ಟ್ರೀಯ ವಿಚಾರಸಂಕಿರಣ"