ಬಂಟ್ವಾಳದಲ್ಲಿ ಸಾಂತ್ವನ ಕೇಂದ್ರ, ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ

ಕರ್ನಾಟಕ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಬಂಟ್ವಾಳದ ಸಾಂತ್ವನ ಕೇಂದ್ರ ಹಾಗೂ ತಾಲೂಕು ಸರಕಾರಿ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

DR. NAGALAXMI CHOUDHARY VISIT SANTWANA KENDRA BANTWAL

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಮಸ್ಯೆಗಳ ಕುರಿತು ಸಾರ್ವಜನಿಕರು ಹಾಗೂ ವೈದ್ಯಾಧಿಕಾರಿಗಳು ಮತ್ತು ಅಧಿಕಾರಿಗಳ ಜತೆ ಮಾಹಿತಿ ಪಡೆದುಕೊಂಡರು

DR NAGALAXMI CHOUDHARY VISIT BANTWAL GOVT HOSPITAL

ತಾಲೂಕು ಮಟ್ಟದ ಸರಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಲು ಗೈನಕಾಲಜಿಸ್ಟ್ ಇಲ್ಲ ಸರಕಾರ ಇಷ್ಟೊಂದು ವ್ಯವಸ್ಥೆ, ಮೂಲಸೌಕರ್ಯಗಳನ್ನು ಮಾಡಿದ ಮೇಲೆ ತಜ್ಞ ವೈದ್ಯರೂ ಬೇಕು ಎಂದು ಈ ಸಂದರ್ಭ ಸುದ್ದಿಗಾರರಿಗೆ ತಿಳಿಸಿದ ಅವರು, ಔಷಧಗಳ ಸ್ಟಾಕ್ ಇದ್ದಾಗ ಹೊರಗೆ ಕಳುಹಿಸುವ ಕುರಿತು ದೂರುಗಳು ಬಂದದ್ದನ್ನು ಪರಿಶೀಲಿಸಿದ ವಿಚಾರವನ್ನು ತಿಳಿಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಎಸ್.ತಿಮ್ಮಯ್ಯ, ಖಾಸಗಿ ಮೆಡಿಕಲ್ ಕಾಲೇಜಿನೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು, ಶೀಘ್ರದಲ್ಲಿ ಆಸ್ಪತ್ರೆಯ ವೈದ್ಯರ ಸಮಸ್ಯೆಗೆ ಪರಿಹಾರ ದೊರಕಲಿದೆ ಎಂದರು.

ಜಾಹೀರಾತು

ಮಧ್ಯಾಹ್ನ ಬಿ.ಸಿ.ರೋಡಿನಲ್ಲಿರುವ ಸಾಂತ್ವನ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಅಲ್ಲಿನ ಕಾರ್ಯಚಟುವಟಿಕೆಗಳ ಕುರಿತು ಸಿಬ್ಬಂದಿಗಳಾದ ವಿದ್ಯಾ ಮತ್ತು ಪ್ರಶಾಂತ್ ಅವರಿಂದ ಮಾಹಿತಿ ಪಡೆದುಕೊಂಡರು. ಬಳಿಕ ಜನಶಿಕ್ಷಣ ಟ್ರಸ್ಟ್ ನ ಶೀನ ಶೆಟ್ಟಿ ಮತ್ತು ಕೃಷ್ಣ ಮೂಲ್ಯ ಅವರು ಮಹಿಳಾ ಸಬಲೀಕರಣದ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಈ ವೇಳೆ ಮಾತನಾಡಿದ ಡಾ. ನಾಗಲಕ್ಷ್ಮೀ, ಸಾಂತ್ವನ ಕೇಂದ್ರವಿದೆ ಎಂಬುದು ತಾಲೂಕಿನ ಎಲ್ಲರಿಗೂ ಗೊತ್ತಾಗಬೇಕು, ಮಹಿಳೆಯರಿಗೆ ಇಲ್ಲಿನ ಸಂಖ್ಯೆಯ ಅರಿವಿರಬೇಕು. ಯಾವುದೇ ಸಮಸ್ಯೆ ಬಂದಾಗ ಸಾಂತ್ವನ ಹೇಳಲು ಸರಕಾರ ನಮ್ಮೊಂದಿಗಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ಆಯೋಗದ ಅಧ್ಯಕ್ಷೆ ಬಂಟ್ವಾಳದ ಎರಡೂ ಕಡೆ ಭೇಟಿ ನೀಡಿದ ವೇಳೆ ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷೆ ಲಾವಣ್ಯ ಬಲ್ಲಾಳ್, ಗ್ಯಾರಂಟಿ ಸಮಿತಿ ಸದಸ್ಯೆ ಐಡಾ ಸುರೇಶ್, ಸಿರಾಜ್ ಮದಕ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಚಿನ್ ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಶಿಶು ಅಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಉಸ್ಮಾನ್, ತಾಲೂಕು ಅಧಿಕಾರಿ ಮಮ್ತಾಜ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಚಿನ್ ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್ ಕುಮಾರ್ ರೈ, ತಾಲೂಕು ಸರಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಪುಷ್ಪಲತಾ, ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸದಸ್ಯ ವೆಂಕಪ್ಪ ಪೂಜಾರಿ, ನ್ಯಾಯವಾದಿ ಶೈಲಜಾ ರಾಜೇಶ್, ಪ್ರಮುಖರಾದ ಅಬ್ಬಾಸ್ ಆಲಿ, ಜೋಸ್ಫಿನ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳದಲ್ಲಿ ಸಾಂತ್ವನ ಕೇಂದ್ರ, ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*