ಪ್ರಮುಖ ಸುದ್ದಿಗಳು

ಬಂಟ್ವಾಳದ ಪಂಜೆ ಭವನ ನಿರ್ಮಾಣಕ್ಕೆ ವೇಗ: ಸಚಿವ ದಿನೇಶ್ ಗುಂಡೂರಾವ್ ಸೂಚನೆ

  • * 2017ರಲ್ಲಿ ಶಂಕುಸ್ಥಾಪನೆ, ನಿಧಾನಗತಿಯಲ್ಲಿ ನಿರ್ಮಾಣ
  • * 2025 ಆದರೂ ಪೂರ್ಣಗೊಳ್ಳದ ಕಾಮಗಾರಿ
  • * ಬಂಟ್ವಾಳ ನೇತ್ರಾವತಿ ದಡದಲ್ಲಿ ಅರ್ಧ ಎಕರೆ ಜಾಗದಲ್ಲಿ ನಿರ್ಮಾಣ
  • * ಪಂಜೆ ಅಧ್ಯಯನಾಸಕ್ತರಿಗೊಂದು ವೇದಿಕೆ
  • * ರಂಗಚಟುವಟಿಕೆ, ಸಾಂಸ್ಕೃತಿಕ, ಸಾಹಿತ್ಯಿಕ ಕಾರ್ಯಕ್ರಮಕ್ಕೆ ಅವಕಾಶ
  • * ಲೈಬ್ರರಿ, ವಿಶಾಲವಾದ ಸಭಾಂಗಣ, ಪಾರ್ಕಿಂಗ್ ವ್ಯವಸ್ಥೆ

ಬಂಟ್ವಾಳದಲ್ಲಿ ನಿರ್ಮಾಣವಾಗುತ್ತಿರುವ ಪಂಜೆ ಭವನ ತ್ವರಿತವಾಗಿ ಪೂರ್ಣಗೊಳಿಸಲು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. REPORT PUBLISHED ABOUT PANJE BHAVANA IN BANTWALNEWS

panje bhavana

ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ವೇಳೆ  ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಜಿಲ್ಲಾ ರಂಗಮಂದಿರ ಕಾಮಗಾರಿ ಜೊತೆಗೆ  ಬಂಟ್ವಾಳದಲ್ಲಿ ನಿರ್ಮಾಣಗೊಳ್ಳುತ್ತಿರುವ ಪಂಜ ಮಂಗೇಶರಾಯ ಸ್ಮಾರಕ ಭವನ ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ ನೀಡಿದ್ದಾರೆ.https://www.bantwalnews.com

ಕನ್ನಡ ಸಾಹಿತ್ಯ ಲೋಕದ ದಿಗ್ಗಜ ಪಂಜೆ ಮಂಗೇಶರಾಯರು ಹುಟ್ಟಿದ ಬಂಟ್ವಾಳದ ಅವರ ಮನೆ ಸನಿಹವೇ ಭವನವೊಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸುಪರ್ದಿಯಲ್ಲಿ ನಿರ್ಮಾಣವಾಗುತ್ತಿದೆ. ನಿರ್ಮಾಣದ ಕೊನೇ ಹಂತದಲ್ಲಿರುವ ಈ ಕಟ್ಟಡ ಪೂರಕ ಅನುದಾನದ ಕೊರತೆಯಿಂದಾಗಿ ಇನ್ನೂ ಅಂತಿಮವಾಗಿಲ್ಲ.ಹೆಚ್ಚಿನ ಹಣಕಾಸಿನ ನೆರವಿನ ಕುರಿತು ಈಗಾಗಲೇ ಸರಕಾರದ ಮಟ್ಟದಲ್ಲಿ ಪತ್ರವ್ಯವಹಾರಗಳು ನಡೆಯುತ್ತಿದ್ದು, ಅದಾದರೆ ಬಂಟ್ವಾಳದ ಸಾಂಸ್ಕೃತಿಕ ಚಟುವಟಿಕೆಗಳಿಗೆ ವೇಗ ದೊರಕಲಿದೆ. ಇದಾದರೆ ಬಂಟ್ವಾಳ ರಂಗಮಂದಿರದ ಕುರಿತು ಇಲ್ಲಿನ ಜನರ ಬಹುಕಾಲದ ಕನಸು ನನಸಾಗಲಿದೆ

ಜಾಹೀರಾತು

2017ರಲ್ಲಿ ಶಿಲಾನ್ಯಾಸವಾಗಿತ್ತು

೨೦೧೭ರಲ್ಲಿ ಸಚಿವರಾಗಿದ್ದ ಬಿ.ರಮಾನಾಥ ರೈ ನಿರ್ದೇಶನದ ಮೇರೆಗೆ ರೇಖಾ ಅಂದಾಜುಪಟ್ಟಿಯನ್ನು ಕರ್ನಾಟಕ ಗೃಹಮಂಡಳಿ ವತಿಯಿಂದ ತಯಾರಿಸಿ, ಆಡಳಿತ ಅನುಮೋದನೆಗೆ ನೀಡಲಾಗಿತ್ತು. ಆ ವರ್ಷ ಅಕ್ಟೋಬರ್ ನಲ್ಲಿ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ೫ ಕೋಟಿ ರೂ ವೆಚ್ಚದ ಪ್ರಸ್ತಾಪಿತ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ್ದರು.

ಇದಕ್ಕೂ ಮೊದಲು ೨೦೦೭ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ, ಬಿ.ಎಸ್.ಯಡಿಯೂರಪ್ಪ ಉಪಮುಖ್ಯಮಂತ್ರಿ ಆಗಿದ್ದ ಸಂದರ್ಭ ಬಂಟ್ವಾಳದಲ್ಲಿ ಪಂಜೆ ಸ್ಮಾರಕ ನಿರ್ಮಾಣಕ್ಕೆ ೫೦ ಲಕ್ಷ ರೂ ಘೋಷಣೆ ಮಾಡಲಾಗಿತ್ತು. ಆದರೆ ಆಗ ಭವನಕ್ಕೆ ಸ್ಥಳ ನಿಗದಿಯಾಗಿರಲಿಲ್ಲ.

File source: http://kn.wikipedia.org/wiki/%E0%B2%9A%E0%B2%BF%E0%B2%A4%E0%B3%8D%E0%B2%B0:Panje_mangesharao.jpg

ಕನ್ನಡ ಸಾಹಿತ್ಯ ಲೋಕದ ದಿಗ್ಗಜ ಪಂಜೆ:

ಪಂಜೆ ಮಂಗೇಶರಾಯರು. (ಜನನ:೧೮೭೪ ಫೆಬ್ರುವರಿ ೨೨, ನಿಧನ:೧೯೩೭ ಅಕ್ಟೋಬರ ೨೪ ) ಕವಿಶಿಷ್ಯ ಕಾವ್ಯನಾಮದಿಂದ ಖ್ಯಾತರಾಗಿದ್ದು, ಅಧ್ಯಾಪಕರಾಗಿ, ದುಡಿದ ಪ್ರಾತಃಸ್ಮರಣೀಯ ಸಾಹಿತಿ. ಶಿಶು ಸಾಹಿತ್ಯದಲ್ಲಿ ಸೇವೆ ಸಲ್ಲಿಸಿದವರು. ಬಂಟವಾಳದಲ್ಲಿಯೇ ಅವರ ಪ್ರಾಥಮಿಕ ವಿದ್ಯಾಭ್ಯಾಸ ನಡೆಯಿತು. ಕನ್ನಡ ಪಾಠಗಳಿಗೆ ಪದ್ಯಗಳು ಬೇಕಾದ ಆ ಕಾಲದಲ್ಲಿ ಪ್ರಥಮವಾಗಿ ಪದ್ಯಪುಸ್ತಕಗಳನ್ನು ಸಂಪಾದಿಸಿದರು. ‘ನಾಗರಹಾವೆ ಹಾವೊಳು ಹೂವೆ‘ ಇವರ ಪ್ರಸಿದ್ಧ ಬಾಲಗೀತೆ, ಕವಿತೆಯು ಆಂಗ್ಲರನ್ನು ಪ್ರತಿಮಾರೂಪದಿಂದ ಉದ್ದೇಶಿಸಿ ಬರೆದ ಕವಿತೆಯಾಗಿದೆ. ‘ಅಣ್ಣನ ವಿಲಾಪ’ ಹೊಸಗನ್ನಡದ ಮೊಟ್ಟಮೊದಲ ಶೋಕಗೀತೆ. ಕನ್ನಡದಲ್ಲಿ ಮೊದಲ ಬಾರಿಗೆ ಕಥನಕವನಗಳನ್ನು ಬರೆದವರೂ ಪಂಜೆಯವರೆ. ಡೊಂಬರ ಚೆನ್ನ ಯು ಸ್ವತಂತ್ರವಾದ ಕಥನ ಕವನ, ರಂಗಸೆಟ್ಟಿ, ನಾಗಣ್ಣನ ಕನ್ನಡಕ, ಕಡೆಕಂಜಿ ಪ್ರಸಿದ್ಧ ಕಥನ ಕವನಗಳು. ೧೯೦೦ರಲ್ಲಿ ಪಂಜೆಯವರು ‘ನನ್ನ ಚಿಕ್ಕ ತಾಯಿ’ ಎಂಬ ಸಣ್ಣ ಕತೆ ಬರೆದಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts