ಪ್ರಮುಖ ಸುದ್ದಿಗಳು

2028ರಲ್ಲಿ ರಮಾನಾಥ ರೈ ಅಭ್ಯರ್ಥಿ ಆಗ್ತಾರೆ, ಅವರನ್ನು ಗೆಲ್ಲಿಸಿ,  ಮತ್ತೆ ನಮ್ದೇ ಸರಕಾರ ಬರುತ್ತೆ – ಬಂಟ್ವಾಳ ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ

ಬಂಟ್ವಾಳ: ೨೦೨೮ಕ್ಕೂ ನಾವೇ ಅಧಿಕಾರಕ್ಕೆ ಬಂದೇ ಬರ್ತೀವಿ. ನಾವು ಅಧಿಕಾರದಲ್ಲಿದ್ದಾಗ ಕಂಬಳಕ್ಕೆ ಏನು ಪ್ರೋತ್ಸಾಹ ನೀಡಬೇಕೋ ಅದಕ್ಕೆ ಪ್ರೋತ್ಸಾಹ ನೀಡುತ್ತೇವೆ. ಕಂಬಳಕ್ಕೆ ಹಣಕಾಸಿನ ನೆರವನ್ನೂ ಕೊಡ್ತೇವೆ, ರಮಾನಾಥ ರೈ ಅವರನ್ನು ಸೋಲಿಸಿದ್ದು ಬೇಸರ ತಂದಿದೆ, ಮುಂದಿನ ಚುನಾವಣೆಯಲ್ಲಿ ಅವರೇ ಅಭ್ಯರ್ಥಿಯಾಗ್ತಾರೆ, ಅವರನ್ನು ಮತ್ತೆ ಗೆಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬಂಟ್ವಾಳದ ನಾವೂರು ಕೂಡಿಬೈಲು ಎಂಬಲ್ಲಿ ಮಾಜಿ ಸಚಿವ ಬಿ‌.ರಮಾನಾಥ ರೈ ನೇತೃತ್ವದಲ್ಲಿ ಶನಿವಾರ ನಡೆದ ಮುಡೂರು ಪಡೂರು ಜೋಡುಕರೆ ಬಂಟ್ವಾಳ ಕಂಬಳದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಮಾನಾಥ ರೈ ಅವರು ತಮ್ಮ ಶಾಸಕ,ಸಚಿವರಾಗಿದ್ದಾಗ ಬಂಟ್ವಾಳ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದರೂ ಜನರು ಸೋಲಿಸಿರುವುದು ನೋವಿನ ಸಂಗತಿಯಾಗಿದೆ. ಇನ್ನೊಂದು ಸಾರಿ ಅವರು ನಿಲ್ಲುತ್ತಾರೆ. ೨೦೨೮ಕ್ಕೆ ಮತ್ತೆ ಅಭ್ಯರ್ಥಿ ಆಗುತ್ತಾರೆ ಎಂದರು

ಜಾಹೀರಾತು

ಬೆಂಜನಪದವು ಕ್ರೀಡಾಂಗಣ

ಬೆಂಜನಪದವಿನಲ್ಲಿ ಹತ್ತು ಕೋಟಿ ರೂ ಮಂಜೂರಾಗಿತ್ತು, ಅದನ್ನು ಅನುಷ್ಠಾನ ಮಾಡಲು ಸಾಧ್ಯವಾಗಿಲ್ಲ. ಮತ್ತೊಮ್ಮೆ ಕ್ರೀಡಾಂಗಣ ನಿರ್ಮಾಣಕ್ಕೆ ನನಗೆ ಅವಕಾಶವನ್ನು ಮಾಡಿಕೊಡಬೇಕು ಎಂದು ಪ್ರಾಸ್ರಾವಿಕವಾಗಿ ಮಾತನಾಡಿದ ಮಾಜಿ ಸಚಿವ, ಕಂಬಳ ಸಮಿತಿ ಗೌರವಾಧ್ಯಕ್ಷ ರಮಾನಾಥ ರೈ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಿಎಂ ಈ ಬಾರಿ ಕ್ರೀಡಾಂಗಣ ನಿರ್ಮಾಣಕ್ಕೆ ನೆರವು ನೀಡುವುದಾಗಿ ಹೇಳಿದರು.

ಬಾರ್ಕೂರು ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ವಿದ್ಯಾವಾಚಸ್ಪತಿ ಡಾ.ಸಂತೋಷ್ ಗುರೂಜಿ, ಎಂ ಎಲ್ ಸಿ ಸಲೀಮ್ ಆಹ್ಮದ್, ಐವಾನ್ ಡಿಸೋಜ, ಶಾಸಕರುಗಳಾದ ಅಶೋಕ್ ಕುಮಾರ್ ರೈ ,ಟಿ.ಡಿ.ರಾಜೇಗೌಡ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ವಿವಿಧ ನಿಗಮದ ಅಧ್ಯಕ್ಷರಾದ ಲಾವಣ್ಯ ಬಲ್ಲಾಳ್,ಟಿ.ಎಮ್ ಶಹೀದ್ ತೆಕ್ಕಿಲ್, ಮಮತಾ ಡಿ.ಎಸ್. ಗಟ್ಟಿ,ಶಾಲೆಟ್ ಪಿಂಟೋ, ಸದಾಶಿವ ಉಳ್ಳಾಲ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ, ಸಹಿತ ಪ್ರಮುಖರು ಹಾಜರಿದ್ದರು. ಕಂಬಳ ಸಮಿತಿಯ ಅಧ್ಯಕ್ಷ ಪಿಯೂಸ್ ಎಲ್ ರೋಡ್ರಿಗಸ್ ಸ್ವಾಗತಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts