ಬಂಟ್ವಾಳ: ಮಹಿಳೆಯರು ಸ್ವಾವಲಂಬಿಯಾಗುವುದರೊಂದಿಗೆ ತಮ್ಮ ಮೇಲಾಗುತ್ತಿರುವ ದೌರ್ಜನ್ಯ, ಅಸಮಾನತೆಯನ್ನು ಧೈರ್ಯವಾಗಿ ಎದುರಿಸಬೇಕು ಎಂದು ಬಿ.ಆರ್.ಎಂ.ಪಿ.ಸಿ. ಶಾಲೆಯ ಪ್ರಿನ್ಸಿಪಾಲ್ ಪೂರ್ಣೇಶ್ವರಿ ಭಟ್ ಹೇಳಿದರು.
ಬಂಟ್ವಾಳ ವಿದ್ಯಾಗಿರಿಯ ಶ್ರೀ ವೆಂಕಟರಮಣಸ್ವಾಮೀ ಸಮೂಹ ವಿದ್ಯಾಸಂಸ್ಥೆ ಆಶ್ರಯದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಎಸ್.ವಿ.ಎಸ್.ಕಾಲೇಜಿನ ಪ್ರಿನ್ಸಿಪಾಲ್ ಪ್ರೊ.ಎಂ.ಡಿ.ಮಂಚಿ ಮಾತನಾಡಿ ಮಹಿಳೆ ಜಾಗೃತಗೊಂಡಾಗ ಸಂಘಟಿತರಾಗಬೇಕು ಎಂದರು.
ಎಸ್.ವಿ.ಎಸ್.ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶಶಿಧರ್ ಕೆ, ಎಸ್.ವಿ.ಎಸ್. ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಚೈತ್ರಾ ಶೆಟ್ಟಿ, ಪೂರ್ವ ಪ್ರಾಥಮಿಕ ಶಾಲೆಯ ವೀಣಾ ದೇವಾಡಿಗ ಉಪಸ್ಥಿತರಿದ್ದರು. ಬಿ.ಸಿ.ಎ.ವಿಭಾಗದ ಮುಖ್ಯಸ್ಥೆ ಸಹನಾ ಸ್ವಾಗತಿಸಿದರು. ಎಸ್.ವಿ.ಎಸ್.ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಭವಿತಾ ವಂದಿಸಿದರು. ರಾಲ್ವಿನ್ ಲೋಯ್ಡ್ ರೋಡ್ರಿಗಸ್ ಅನಿಸಿಕೆ ವ್ಯಕ್ತಪಡಿಸಿದರು. ವಿದ್ಯಾರ್ಥಿನಿ ವೀಕ್ಷಿತಾ ಗಟ್ಟಿ ನಿರೂಪಿಸಿದರು.