ಕಲ್ಲಡ್ಕ

ಉಪಾಹಾರ ಸೇವನೆಗೆಂದು ಕಲ್ಲಡ್ಕ ಸಮೀಪ ಬಸ್ ನಿಲ್ಲಿಸಿದ್ದ ವೇಳೆ ಕಳವು ಪ್ರಕರಣ: ಆರೋಪಿ ಬಂಧನ

ಬಂಟ್ವಾಳ: ಕಲ್ಲಡ್ಕ ಸಮೀಪ ಕುದ್ರೆಬೆಟ್ಟು ಎಂಬಲ್ಲಿ ಹೋಟೆಲ್ ಒಂದರ ಬಳಿ ಉಪಾಹಾರ ಸೇವನೆಗೆಂದು ಬಸ್ ಅನ್ನು ನಿಲ್ಲಿಸಿದ್ದ ವೇಳೆ ಪ್ರಯಾಣಿಕರು ಯಾರೂ ಇಲ್ಲದಾಗ ಚಿನ್ನಾಭರಣವಿದ್ದ ಬ್ಯಾಗ್ ಒಂದನ್ನು ಕಳವು ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬಂಟ್ವಾಳ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ನವೆಂಬರ್ 19ರಂದು ಈ ಘಟನೆ ನಡೆದಿತ್ತು. ಬಸ್ ನಲ್ಲಿ ಬ್ಯಾಗ್ ಒಳಗಡೆ ಇರಿಸಿದ್ದ ಸುಮಾರು 170 ರಿಂದ 180 ಗ್ರಾಂ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ವೇಳೆ ಆರೋಪಿ ಮಧ್ಯಪ್ರದೇಶ ರಾಜ್ಯದ ಧಾರಾ ಜಿಲ್ಲೆಯ ಸಮದ್ ಖಾನ್ (37) ಎಂದು ಗುರುತಿಸಲಾಗಿತ್ತು. ಇದೀಗ ಆತನನ್ನು ಬಂಧಿಸಲಾಗಿದ್ದು, ಕಳ್ಳತನ ಮಾಡಿದ 174 ಗ್ರಾಂ ಗಳಷ್ಟು ಅಂದಾಜು 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಲಾಗಿದೆ.

ಪತ್ತೆ ಕಾರ್ಯದಲ್ಲಿ ಬಂಟ್ವಾಳ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಯಶ್ ಕುಮಾರ್ ಶರ್ಮಾ, ಐಪಿಎಸ್, ನಿರ್ದೇಶನದಂತೆ, ಪ್ರಕರಣದ ತನಿಖಾಧಿಕಾರಿಯಾದ ಪೊಲೀಸ್ ನಿರೀಕ್ಷಕರಾದ ಅನಂತಪದ್ಮನಾಭ ಕೆ.ವಿ, ಉಪನಿರೀಕ್ಷಕರಾದ ಸಂದೀಪ್ ಕುಮಾರ್ ಶೆಟ್ಟಿ ಹಾಗೂ ಸಿಬ್ಬಂದಿಗಳಾದ ಸಿಬ್ಬಂದಿಗಳಾದ ವಿಜಯ್ ಕುಮಾರ್, ರಾಜೇಶ್, ಇರ್ಷಾದ್, ಬಸವರಾಜ, ಸುರೇಶ್ ಕುಮಾರ್, ವಿಜಯ್ ಕುಮಾರ್, ರೇವತಿ ಹಾಗೂ ಜಿಲ್ಲಾ ಪೊಲೀಸ್ ಘಟಕದ ಗಣಕ ಯಂತ್ರ ವಿಭಾಗದ ಸಿಬ್ಬಂದಿಗಳಾದ ಸಂಪತ್ ಕುಮಾರ್  ಹಾಗೂ ದಿವಾಕರ ಪಾಲ್ಗೊಂಡಿದ್ದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.