ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರಿ ನಾಗದೇವರ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಕೀಕಾಂಗೋಡು ಬ್ರಹ್ಮಶ್ರೀ ಅರವತ್ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ ಮಾರ್ಚ್ 16ರಂದು ನಡೆಯಲಿದೆ ಎಂದು ಆಡಳಿತ ಸಮಿತಿ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ತಿಳಿಸಿದ್ದಾರೆ.
ಬೆಳಗ್ಗೆ ಪ್ರಾರ್ಥನೆ, ಗಣಪತಿ ಹೋಮ, 10.30ಕ್ಕೆ ವಿಶೇಷ ನಾಗಾರಾಧನೆ, ಮಧ್ಯಾಹ್ನ ಶ್ರೀದೇವಿಗೆ ಕಲಶಾಭಿಷೇಕ ಸಹಿತ ವಿಶೇಷ ಮಹಾಪೂಜೆ, ಮಧ್ಯಾಹ್ನ ಮಹಾಅನ್ನಸಂತರ್ಪಣೆ, ಸಂಜೆ ಭಜನಾ ಕಾರ್ಯಕ್ರಮ, ರಾತ್ರಿ ರಂಗಪೂಜೆ ನಡೆಯಲಿದೆ. 17ರಂದು ಸಂಜೆ ಸಾಮೂಹಿಕ ಆಶ್ಲೇಷ ಬಲಿಪೂಜೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.