ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿರುವ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ ನಡೆಯಲಿದ್ದು. ಪೂರ್ವಭಾವಿಯಾಗಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವಠಾರದಲ್ಲಿ ಮಾರ್ಚ್ 15ರ ಭಾನುವಾರ ಸಂಜೆ 6.30ಕ್ಕೆ ಸಮಾಲೋಚನಾ ಸಭೆ ನಡೆಯಲಿದೆ. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ಅರುಣ ಶ್ಯಾಮ್ ಉಪಸ್ಥಿತರಿರುವರು, ಹಿಂದು ಬಂಧುಗಳು, ಅಪೇಕ್ಷಿತರು ಉಪಸ್ಥಿತರಿರಬೇಕಾಗಿ ಸಮಿತಿ ಪ್ರಕಟಣೆ ತಿಳಿಸಿದೆ. ಭಾರತದ ಏಕಾದಶ ಪುಣ್ಯ ನದಿಗಳ ತೀರ್ಥದೊಂದಿಗೆ ಬ್ರಹ್ಮಕಲಶಾಭಿಷೇಕ ನಡೆಯಲಿದ್ದು, ಈ ತೀರ್ಥದ ಭವ್ಯ ಮೆರವಣಿಗೆ ಸಂಗಮ ಕ್ಷೇತ್ರ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ, ಮಹಾಕಾಳಿ ದೇವಸ್ಥಾನದಿಂದ ಮಾರ್ಚ್ 30ರಂದು ಚಾಲನೆಗೊಂಡು, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆದು, ಹೊರೆಕಾಣಿಕೆಗಳ ಸಹಿತ ನಾಡಿನ ಸಾಧು, ಸಂತರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಪದ್ಯಾಣ ತಲುಪಲಿದೆ.