ಬಂಟ್ವಾಳ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ: ಸ್ವಸಹಾಯ ಸಂಘಗಳಿಗೆ ಬ್ಯಾಂಕ್ ಸಾಲ ವಿತರಣೆ

ದೀನ್ ದಯಾಳ್ ಅಂತ್ಯೋದಯ ಯೋಜನೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಜೀವನೋಪಾಯ ಸಂವರ್ಧನ ಸಂಸ್ಥೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸ್ವ-ಸಹಾಯ ಸಂಘಗಳಿಗೆ ಬ್ಯಾಂಕ್ ಸಾಲ ವಿತರಣೆ ಮತ್ತು ಪಂಚ ಗ್ಯಾರಂಟಿ ಯೋಜನೆಗಳ ಅರಿವು ಕಾರ್ಯಕ್ರಮ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಿತು.

ತಾಲೂಕು ಪಂಚಾಯತ್ ಬಂಟ್ವಾಳ, ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಬಂಟ್ವಾಳ ತಾಲೂಕು, ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಶಿಶು ಅಭಿವೃದ್ಧಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ.) ಮಂಗಳೂರು, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ಭಾರತಾಂಬೆ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ (ರಿ.) ಬಂಟ್ವಾಳ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಯಿತು.

ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷೆ ಜಯಂತಿ ಆರ್. ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ಉಪನ್ಯಾಸಕಿ ಮಧುಮಾಲ ಮಹಿಳಾ ಸಬಲೀಕರಣ ಕುರಿತು ಉಪನ್ಯಾಸ ನೀಡಿದರು.

ಜಾಹೀರಾತು

ಈ ವೇಳೆ ಮಾತನಾಡಿದ ಮಾಜಿ ಸಚಿವ ಬಿ. ರಮಾನಾಥ ರೈ, ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ವರ್ತಮಾನದ ಸಂದರ್ಭದಲ್ಲಿ ಪ್ರತಿಯೊಬ್ಬರಿಗೂ ಅನುಕೂಲಕರವಾಗಿದ್ದು, ವಿಶೇಷವಾಗಿ ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕೆ ಸಹಕಾರಿಯಾಗಿವೆ ಎಂದು ಹೇಳಿದರು. ಮಹಿಳಾ ಸ್ವಾತಂತ್ರ್ಯ ಮತ್ತು ಮಹಿಳಾ ಹಕ್ಕುಗಳ ಬಗ್ಗೆ ಸಮಾಜದಲ್ಲಿ ಹೆಚ್ಚಿನ ಅರಿವು ಮೂಡಬೇಕು. ಮೀಸಲಾತಿ ಭಿಕ್ಷೆಯಲ್ಲ, ಅದು ಮಹಿಳೆಯರ ಹಕ್ಕು ಎಂದು ಅವರು ತಿಳಿಸಿದರು. ಪಂಚಾಯತ್ ರಾಜ್ ವ್ಯವಸ್ಥೆಯ ತಿದ್ದುಪಡಿಗಳು ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಿವೆ ಎಂದು ಹೇಳಿದರು.

ಯೋಜನಾ ನಿರ್ದೇಶಕರಾದ ಜಯರಾಮ್ ಮಾತನಾಡಿ, ಸರ್ಕಾರ ಹಾಗೂ ಎನ್‌ಆರ್‌ಎಲ್‌ಎಂ ಯೋಜನೆಯಡಿ ಮಹಿಳೆಯರಿಗೆ ಹಲವು ಆರ್ಥಿಕ ಸೌಲಭ್ಯಗಳು ಮತ್ತು ತರಬೇತಿಗಳನ್ನು ನೀಡಲಾಗುತ್ತಿದ್ದು, ಮಹಿಳೆಯರು ತಮ್ಮ ಜೊತೆಗೆ ಇನ್ನಷ್ಟು ಮಹಿಳೆಯರನ್ನು ಸಂಘಟನೆಗೆ ಕರೆತಂದು ಯೋಜನೆಗಳ ಪ್ರಯೋಜನ ಪಡೆಯಬೇಕು ಎಂದು ಕರೆ ನೀಡಿದರು. ಈಗಾಗಲೇ ಪ್ರತಿ ಸಂಘಕ್ಕೆ ನೀಡಲಾಗುತ್ತಿರುವ ಸಮುದಾಯ ಬಂಡವಾಳ ನಿಧಿ ₹1.5 ಲಕ್ಷವನ್ನು ₹3 ಲಕ್ಷಕ್ಕೆ ಹೆಚ್ಚಿಸುವ ಕುರಿತು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್ , ಶಿಶುಅಭಿವೃದ್ಧಿ ಯೋಜನಾಧಿಕಾರಿ ಮಮ್ತಾಝ್, ಭಾರತಾಂಬೆ ಸಂಜೀವಿನಿ‌ತಾಲೂಕು  ಒಕ್ಕೂಟದ ಅಧ್ಯಕ್ಷೆ  ವಿದ್ಯಾ, ತಾ.ಪಂ.ಸಹಾಯಕ ನಿರ್ದೇಶಕ ವಿಶ್ವನಾಥ್‌ಬೈಲಮೂಲೆ, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಸುಧಾ, ತಾಲೂಕು ವ್ಯವಸ್ಥಾಪಕರಾದ ಪ್ರದೀಪ್‌ಕಾಮತ್‌,  ಸಾಂಘವಿ,  ನರೇಗಾ ಐಇಸಿ ಸಂಯೋಜಕ ರಾಜೇಶ್ , ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಕಾರ್ಯನಿರ್ವಹಣಾಧಿಕಾರಿ ಜ್ಯೋತಿರಾಜ್,  ರೈತೋತ್ಪಾದಕ ಕಂಪನಿಯ ಅಧ್ಯಕ್ಷೆ ಶೋಭಾ, ಗ್ಯಾರಂಟಿ ಯೋಜನೆ‌ಬಂಟ್ವಾಳ‌ಸಮಿತಿಯ ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಮುನ್ನ ತಾಲೂಕು ಮಟ್ಟದ ಮಾಸಿಕ ಸಂತೆಯನ್ನು ತಾಲೂಕುಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸಚಿನ್ ಕುಮಾ‌ರ್ ಅವರು ಉದ್ಘಾಟಿಸಿದರು.

ವಲಯ ಮೇಲ್ವಿಚಾರಕರಾದ ದೀಕ್ಷಿತಾ, ಕುಸುಮಾ ಕಾರ್ಯಕ್ರಮ‌ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಸ್ವ-ಸಹಾಯ ಸಂಘಗಳಿಗೆ ಬ್ಯಾಂಕ್ ಸಾಲ ವಿತರಣೆ ನಡೆಯಿತು. ತಾಲೂಕು ಮಟ್ಟದ ಮಾಸಿಕ ಸಂತೆ, ಸಾಧಕರಿಗೆ ಸನ್ಮಾನ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಕಾರ್ಯಕ್ರಮದ ವಿಶೇಷತೆಗಳಾಗಿದ್ದವು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts