ಶುಕ್ರವಾರ ರಾತ್ರಿ ಪಾಣೆಮಂಗಳೂರಿನಲ್ಲಿ ನಡೆದ ಎರಡು ಬೈಕ್ ಗಳ ನಡುವಿನ ಅಪಘಾತದಲ್ಲಿ ಶಂಭೂರಿನ ಶೇಡಿಗುರಿಯಲ್ಲಿರುವ ಛಾಯಾಗ್ರಾಹಕ ರಕ್ಷಿತ್ ಶೆಟ್ಟಿ (45) ಅವರು ತೀವ್ರ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಬೈಕ್ ಗಳ ನಡುವೆ ಅಪಘಾತ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಛಾಯಾಗ್ರಾಹಕ ಸಂಘದ ಬಂಟ್ವಾಳ ವಲಯದ ಸಕ್ರೀಯ ಸದಸ್ಯ, ಅತ್ಯುತ್ತಮ ವಿಡಿಯೋಗ್ರಾಫರ್ ಆಗಿದ್ದ ರಕ್ಷಿತ್ ಅವರ ಮಗಳ 10 ನೇ ವರ್ಷದ ಹುಟ್ಟು ಹಬ್ಬದ ಕಾರ್ಯಕ್ರಮ ಮಾ.15 ರಂದು ಮನೆಯಲ್ಲಿ ನಡೆಯಲು ತಯಾರಿಗಳು ಮಾಡಲಾಗಿತ್ತು. ರಕ್ಷಿತ್ ಸಹೋದರ ರಂಜಿತ್ ಅವರೂ ವರ್ಷಗಳ ಹಿಂದೆ ಅಪಘಾತದಲ್ಲಿ ಗಾಯಗೊಂಡು ಮಲಗಿದ ಸ್ಥಿತಿಯಲ್ಲಿ ಮನೆಯಲ್ಲಿದ್ದಾರೆ.