ಬಂಟ್ವಾಳ

ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ರುದ್ರನಮನಂ

ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿರುವ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮಾ.30ರಿಂದ ಏ.6ರವರೆಗೆ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವಭಾವಿಯಾಗಿ ಭಾನುವಾರ ನಡೆದ ರುದ್ರನಮನಂ ಕಾರ್ಯಕ್ರಮದಲ್ಲಿ ಸಾಮೂಹಿಕ ರುದ್ರಪಠಣ ನಡೆಯಿತು. ಸುಮಾರು 75ಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು. ಇದೇ ವೇಳೆ ಕ್ಷೇತ್ರದ ವೆಬ್ ಸೈಟ್ ಅನಾವರಣ ಹಾಗೂ ಬ್ರಹ್ಮಕಲಶ ಗೀತೆ ಬಿಡುಗಡೆ ಮಾಡಲಾಯಿತು. ಸಂಜೆ ಸಮಾಲೋಚನಾ ಸಭೆ ನಡೆಯಿತು.

INAUGURATION

ಧಾರ್ಮಿಕ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರದ ವೆಬ್ ಸೈಟ್ ಅನಾವರಣ ಕಾರ್ಯಕ್ರಮ ಮತ್ತು ಬ್ರಹ್ಮಕಲಶ ಗೀತೆಯನ್ನು ಬಿಡುಗಡೆಗೊಳಿಸಿ ದಿಕ್ಸೂಚಿ ಮಾರ್ಗದರ್ಶನ ನೀಡಿದ ಉಜಿರೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್, ಧರ್ಮಸ್ಥಳಕ್ಕೂ ಪದ್ಯಾಣಕ್ಕೂ ಯಕ್ಷಗಾನದ ಮೂಲಕ ನಂಟು ಬೆಸೆದಿದೆ. ಸಾಂಸ್ಕೃತಿಕ ಕ್ಷೇತ್ರಕ್ಕೆ ಪದ್ಯಾಣದ ಮಣ್ಣಿನ ಕೊಡುಗೆ ಅನನ್ಯ. ಹಲವು ವಿದ್ವಾಂಸರು ಈ ಪರಿಸರದಲ್ಲಿದ್ದಾರೆ ಎಂದು ಹೇಳಿದರು. ಶೌಚಾಲಯ, ಪಾರ್ಕಿಂಗ್ ಮತ್ತು ಭೋಜನ ವ್ಯವಸ್ಥೆ ಕುರಿತು ವಿಶೇಷ ಗಮನ ಹರಿಸುವಂತೆ ಸಲಹೆ ನೀಡಿದರು.

RAJESH NAIK ULIPPADY

ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ, ನಾನು ಶಾಸಕನಾದ ಬಳಿಕ ಮುನ್ನೂರಕ್ಕೂ ಅಧಿಕ ದೇವಸ್ಥಾನಗಳ ಸುತ್ತಮುತ್ತಲಿನ ಸಂಪರ್ಕ ರಸ್ತೆ ಅಭಿವೃದ್ಧಿ ಸಹಿತ ಅಭಿವೃದ್ಧಿಗೆ ನೆರವಾಗುವ ಅವಕಾಶ ದೊರೆಯಿತು, ಪದ್ಯಾಣ ಕ್ಷೇತ್ರದ ಬೆಳವಣಿಗೆಗೆ ತನ್ನ ಸಹಕಾರ ಯಾವತ್ತೂ ಇದೆ ಎಂದರು.

ಜಾಹೀರಾತು

ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಅಧ್ಯಕ್ಷ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಡಾ.ಟಿ.ಶ್ಯಾಮ ಭಟ್ ವಹಿಸಿ ಮಾತನಾಡಿ, ಪದ್ಯಾಣ ಬ್ರಹ್ಮಕಲಶೋತ್ಸವಕ್ಕೆ ಸ್ಥಳೀಯರೆಲ್ಲರ ಸಹಕಾರದೊಂದಿಗೆ ಪರವೂರ ಜನರ ಸಹಕಾರವೂ ದೊರಕುತ್ತಿದ್ದು, ವಿಜೃಂಭಣೆಯಿಂದ ಕಾರ್ಯಕ್ರಮಗಳು ನಡೆಯಲು ಎಲ್ಲರ ಮಾರ್ಗದರ್ಶನ ಅಗತ್ಯ ಎಂದರು.

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ಅರುಣಶ್ಯಾಮ ಪ್ರಾಸ್ತಾವಿಕವಾಗಿ ಮಾತನಾಡಿ, ಸಿದ್ಧತೆ ಕುರಿತು ವಿವರಿಸಿ, ಸರ್ವರ ಸಹಕಾರ ಕೋರಿದರು.

ಮುಖ್ಯ ಅತಿಥಿಗಳಾಗಿ ಬೆನಕಾ ಗೋಲ್ಡ್ ಬೆಂಗಳೂರು ಎಂ.ಡಿ. ಭರತ್ ಕುಮಾರ್ ಎಸ್, ಕಾಕುಂಜೆ ಸಾಫ್ಟ್ ವೇರ್ ಎಂ.ಡಿ. ಕಾಕುಂಜೆ ಗೋಪಾಲಕೃಷ್ಣ ಭಟ್, ಪತ್ರಕರ್ತ ಜಿತೇಂದ್ರ ಕುಂದೇಶ್ವರ ಮಾತನಾಡಿ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವಕ್ಕೆ ಶುಭ ಕೋರಿದರು.

ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಸೇರಾಜೆ ಗೋಪಾಲಕೃಷ್ಣ ಭಟ್, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಪದ್ಯಾಣ ರಘುರಾಮ ಕಾರಂತ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅರವಿಂದ ಪದ್ಯಾಣ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಶ್ಯಾಮಸುದರ್ಶನ ಹೊಸಮೂಲೆ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಈಶಾನ್ಯ ಪದ್ಯಾಣ, ಬ್ರಹ್ಮಕಲಶೋತ್ಸವ ಸಂಘಟನಾ ಕಾರ್ಯದರ್ಶಿ ಶಿವಪ್ರಸಾದ ಶೆಟ್ಟಿ ಅನೆಯಾಲಗುತ್ತು, ಸಹಿತ ನಾನಾ ಸಮಿತಿಗಳ ಪ್ರಮುಖರು ಈ ಸಂದರ್ಭ  ಉಪಸ್ಥಿತರಿದ್ದರು.

ಆಡಳಿತ ಮೊಕ್ತೇಸರ ಸತ್ಯನಾರಾಯಣ ಭಟ್ ಸೇರಾಜೆ ಸ್ವಾಗತಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಕೃಷ್ಣ ಎಂ.ಆರ್. ಕಡಬ ವಂದಿಸಿದರು. ವಾದಿರಾಜ ಕಲ್ಲೂರಾಯ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.