ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ವಿಚಾರಸಂಕಿರಣ
ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ವಸಾಹತು ಮನೋಭಾವದಿಂದ ಭಾರತೀಯತೆಡೆಗೆ ಒಂದು ಚಿಂತನೆ ಎಂಬ ಕುರಿತು ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣ ಮಾರ್ಚ್ 20ರಂದು ನಡೆಯಲಿದೆ.
ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್, ಪ್ರಸ್ತುತ ಸನ್ನಿವೆಶದಲ್ಲಿ ವಿದೇಶಿ ವಿಚಾರವನ್ನು ನಾವು ಒಪ್ಪಿಕೊಂಡಿದ್ದೇವೆ. ನಮ್ಮತನವನ್ನು ನಾವು ಉಳಿಸಿಕೊಳ್ಳುವ ಹಿನ್ನೆಲೆ ಚಿಂತನ ಮಂಥನ ನಡೆಯಲಿದೆ ಎಂದರು.
ಬೆಳಗ್ಗೆ 10 ಗಂಟೆಗೆ ವಿದ್ಯಾಕೇಂದ್ರದ ಆಝಾದ್ ಭವನದಲ್ಲಿ ವಿದ್ಯಾಕೇಂದ್ರ ಅಧ್ಯಕ್ಷ ಬಿ.ನಾರಾಯಣ ಸೋಮಯಾಜಿ ಅಧ್ಯಕ್ಷತೆಯಲ್ಲಿ ಪತ್ರಕರ್ತ ರಂಗನಾಥ ಭಾರದ್ವಾಜ್ ಉದ್ಘಾಟಿಸುವರು.
ಗಳೂರಿನ ವಿಭು ಅಕಾಡೆಮಿ ಸ್ಥಾಪಕಿ ಡಾ.ಆರತಿ ವಿ.ಬಿ ಅವರು ಭಾಷೆ, ಧರ್ಮ, ಸಂಸ್ಕೃತಿ ಮತ್ತು ಆಚರಣೆಗಳ ಮೇಲೊಂದು ಇಣುಕುನೋಟ ವಿಷಯದ ಕುರಿತು ಮಾತನಾಡುವರು. ಆಡಳಿತ ಮತ್ತು ನ್ಯಾಯಾಂಗ ವ್ಯವಸ್ಥೆ ವಸಾಹತುಭಾವದಿಂದ ಮುಕ್ತವಾಗುವತ್ತ ವಿಷಯ ಕುರಿತು ಮಾಜಿ ಶಾಸಕ ರಾಜೀವ್ ಪಿ, ಶಿಕ್ಷಣ, ಇತಿಹಾಸದ ಕುರಿತು ಚಿಂತಕ ರೋಹಿತ್ ಚಕ್ರತೀರ್ಥ ಮಾತನಾಡುವರು. ಪ್ರಜ್ಞಾಪ್ರವಾಹದ ಅಖಿಲ ಭಾರತೀಯ ಟೋಳಿ ಸದಸ್ಯ ರಘುನಂದನ್ ಮುಕ್ತ ಚಿಂತನ ಗೋಷ್ಠಿ ನಡೆಸಿ, ಸಮಾರೋಪ ಭಾಷಣ ಮಾಡಲಿದ್ದಾರೆ. ಸುಮಾರು 800ರಷ್ಟು ಮಂದಿ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.
ವಿದ್ಯಾಕೇಂದ್ರದ ಅಧ್ಯಕ್ಷ ಬಿ.ನಾರಾಯಣ ಸೋಮಯಾಜಿ, ಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರಕಟ್ಟೆ, ಆಡಳಿತ ಮಂಡಳಿ ಸದಸ್ಯರಾದ ಲಕ್ಷ್ಮೀ ರಘುರಾಜ್ ಉಪಸ್ಥಿತರಿದ್ದರು.