ಗುಡ್ಡೆಯಂಗಡಿಯ ನೂರುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದ್ ಉಲ್ ಫಿತರ್

ಶುಕ್ರವಾರ ಸಂಭ್ರಮದ ಈದ್ ಉಲ್ ಫಿತರ್ ಆಚರಿಸಲಾಯಿತು. ಮುಸ್ಲಿಂ ಸಮುದಾಯದವರು ರಂಜಾನ್ ತಿಂಗಳ ಉಪವಾಸದ ನಂತರ ಆಚರಿಸುವ ಈ ಹಬ್ಬದ ವೇಳೆ ಬೆಳಗ್ಗಿನಿಂದಲೇ ಬಂಟ್ವಾಳ ತಾಲೂಕಿನ ಮಸೀದಿಗಳಿಗೆ ಆಗಮಿಸಿ ಸಂಭ್ರಮ ಹಂಚಿಕೊಂಡರು.

ಸಾಮೂಹಿಕ ಈದ್ ನಮಾಝ್ ನಂತರ ಮುಸ್ಲಿಂ ಬಾಂಧವರು ಪರಸ್ಪರ ಆಲಿಂಗನ ಮಾಡಿಕೊಂಡು ಈದ್ ಮುಬಾರಕ್ ಎಂದು ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

ಈದ್ ಉಲ್ ಫಿತರ್ ರಂಜಾನ್ ಉಪವಾಸದ ಪೂರ್ಣಗೊಳ್ಳುವಿಕೆಯ ಸಂಕೇತವಾಗಿದ್ದು, ದಾನ-ಧರ್ಮ, ಸಹಾಯ-ಸಹಕಾರದ ಮಹತ್ವವನ್ನು ಒತ್ತಿಹೇಳುವ ಹಬ್ಬ. ಫಿತ್ರ್ ಝಕಾತ್ (ಕಡ್ಡಾಯ ದಾನ) ನೀಡಿ ಬಡವರಿಗೆ ಸಹಾಯ ಮಾಡುವ ಸಂಪ್ರದಾಯವನ್ನು ಇಲ್ಲಿ ಅನುಸರಿಸಲಾಗುತ್ತದೆ.

ಜಾಹೀರಾತು

ದಕ್ಷಿಣ ಕನ್ನಡ  ಜಿಲ್ಲಾಧಿಕಾರಿ ಸಾರ್ವಜನಿಕ ರಜೆ ಘೋಷಿಸಿದ್ದು, ಕರಾವಳಿ ಜಿಲ್ಲೆಗಳಲ್ಲಿ ಚಂದ್ರ ದರ್ಶನವಾದ್ದರಿಂದ ರಾಜ್ಯದ ಇತರ ಭಾಗಗಳಿಗಿಂತ ಒಂದು ದಿನ ಮುಂಚಿತವಾಗಿ ಈದ್ ಆಚರಣೆ ನಡೆದಿದೆ.

ಪಾಣೆಮಂಗಳೂರಿನ ಗುಡ್ಡೆಯಂಗಡಿಯ ನೂರುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದ್ – ಉಲ್ –ಫಿತ್ರ್ ಆಚರಣೆ ನಡೆಯಿತು. ಕುತ್ಬ ಮತ್ತು ನಮಾಜ್ ಅನ್ನು ಖತೀಬರಾದ ಆಸೀಫ್ ದಾರಿಮಿ ನೆರವೇರಿಸಿದರು. ಮಾಜಿ ಸದಸ್ಯ ಅಬುಬಕ್ಕರ್ ಸಿದ್ದೀಕ್ ಗುಡ್ಡೆಯಂಗಡಿ, ಮಸೀದಿ ಅಧ್ಯಕ್ಷ ಮಹಮ್ಮದ್ ಸಜಿಪ,  ಅಬುಬಕರ್ ಮೆಲ್ಕಾರ್ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಗುಡ್ಡೆಯಂಗಡಿಯ ನೂರುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದ್ ಉಲ್ ಫಿತರ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*