ಬಿ.ಸಿ.ರೋಡ್ ಬೈಪಾಸ್ ನ ಆರಾಧನಾ ಫ್ರೆಂಡ್ಸ್ ಸರ್ಕಲ್ ವತಿಯಿಂದ 38ನೇ ವಾರ್ಷಿಕೋತ್ಸವ ಅಂಗವಾಗಿ ಯಕ್ಷಗಾನ ಬಯಲಾಟ, ಸನ್ಮಾನ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಿತು.
ಈ ಸಂದರ್ಭ ಹನುಮಗಿರಿ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ವತಿಯಿಂದ ಸುಧನ್ವ, ಬಬ್ರುವಾಹನ ವೀರವರ್ಮ ಎಂಬ ಪೌರಾಣಿಕ ಪ್ರಸಂಗದ ಬಯಲಾಟ ನಡೆಯಿತು.
ಕೆ.ಮರಿಯಪ್ಪಯ್ಯ ಹೊಳ್ಳ ಮತ್ತು ಲಕ್ಷ್ಮಮ್ಮ ಸ್ಮರಣಾರ್ಥ ನೀಡುವ ಆರಾಧನಾ ಪ್ರಶಸ್ತಿ 2026ನ್ನು ಯಕ್ಷಗಾನದ ಮೇರು ಕಲಾವಿದ ಪೆರ್ಮುದೆ ಜಯಪ್ರಕಾಶ್ ಶೆಟ್ಟಿ ಅವರಿಗೆ ಇದೇ ಸಂದರ್ಭ ನೀಡಿ ಗೌರವಿಸಲಾಯಿತು.
ಮಾಜಿ ಸಚಿವ ಬಿ.ರಮಾನಾಥ ರೈ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ, ಯಕ್ಷಗಾನ ನಮ್ಮ ನೆಲದ ಹೆಮ್ಮೆಯ ಕಲೆಯಾಗಿದ್ದು, ಅದನ್ನು ಉಳಿಸಿ ಬೆಳೆಸುವಲ್ಲಿ ಸಂಘ, ಸಂಸ್ಥೆಗಳು ಹಾಗೂ ಪ್ರಜ್ಞಾವಂತ ಪ್ರೇಕ್ಷಕರ ಪಾತ್ರ ಹಿರಿದು ಎಂದರು.
ಈ ಸಂದರ್ಭ ಮಾತನಾಡಿದ ಕಲಾವಿದ ಜಯಪ್ರಕಾಶ ಶೆಟ್ಟಿ, ಆರಾಧನಾ ಫ್ರೆಂಡ್ಸ್ ಕಳೆದ ಮೂವತ್ತೆಂಟು ವರ್ಷಗಳಿಂದ ಚಟುವಟಿಕೆಯಲ್ಲಿದ್ದು, ಯಕ್ಷಗಾನ ಹಾಗೂ ಕಲಾವಿದರನ್ನು ಪ್ರೋತ್ಸಾಹಿಸುತ್ತಾ ಬಂದಿದೆ. ಕಲಾವಿದರು ಜನರ ಆಸ್ತಿಯಾಗಿದ್ದು, ಅವರ ಅಭಿಮಾನದಿಂದ ಮತ್ತಷ್ಟು ರಂಗದಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದರು.
ಕಳೆದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಸ್ಥಳೀಯ ವಿದ್ಯಾರ್ಥಿನಿ ಪ್ರಾರ್ಥನಾ ಎಸ್. ರಾವ್ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ವೇದಿಕೆಯಲ್ಲಿ ರೋಟರಿ ಜಿಲ್ಲಾ ಮಾಜಿ ಗವರ್ನರ್ ಎನ್. ಪ್ರಕಾಶ್ ಕಾರಂತ, ಬುಡಾ ಅಧ್ಯಕ್ಷ ಬೇಬಿ ಕುಂದರ್, ಜಿಪಂ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬಂಟ್ವಾ ತಾಲೂಕು ಬಿಲ್ಲವ ಸಂಘದ ಉಪಾಧ್ಯಕ್ಷ ಜಯಪ್ರಕಾಶ್ ಜೆ.ಎಸ್, ಯುವವಾಹಿನಿ ಮಾಜಿ ಅಧ್ಯಕ್ಷ ಹರೀಶ್ ಕೋಟ್ಯಾನ್ ಕುದನೆ, ಬಂಟ್ವಾಳ ವಲಯ ಗ್ಯಾರೇಜ್ ಮಾಲೀಕರ ಸಂಘದ ಅಧ್ಯಕ್ಷ ಸುಧೀರ್ ಕುಮಾರ್, ಪ್ರಮುಖರಾದ ಗಣಪತಿ ಸೋಮಯಾಜಿ, ಸುಧಾಕರ ಹೊಳ್ಳ, ಸುರೇಶ್ ಹೊಳ್ಳ, ನರೇಶ್ ಹೊಳ್ಳ, ಪ್ರಕಾಶ್ ಪೂಂಜರಕೋಡಿ, ಯೋಗೀಶ್ ಪೂಂಜಕೋಡಿ, ಸಂಜೀವ ಕೊಟ್ಟಾರಿ, ರಾಮಚಂದ್ರ ಮಯ್ಯ, ಗಣೇಶ್ ಪೂಂಜರಕೋಡಿ ಮತ್ತು ಸರ್ವಸದಸ್ಯರು ಉಪಸ್ಥಿತರಿದ್ದರು, ಜಗದೀಶ ಹೊಳ್ಳ ಕಾರ್ಯಕ್ರಮ ನಿರ್ವಹಿಸಿದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…