ಒಡಿಯೂರು: ಶ್ರೀ ಕ್ಷೇತ್ರ ಒಡಿಯೂರಿನಲ್ಲಿ ಶ್ರೀ ಗುರುದೇವದತ್ತ ಸಂಸ್ಥಾನಂನ ಶ್ರೀ ಗುರುದೇವಾನಂದ ಸ್ವಾಮೀಜಿ ಮಾರ್ಗದರ್ಶನದಲ್ಲಿ ಹನುಮಜ್ಜಯಂತಿ ಮಹೋತ್ಸವ, ಶ್ರೀಮದ್ರಾಮಾಯಣ ಮಹಾಯಜ್ಞ ಕಾರ್ಯಕ್ರಮಗಳು ಮಾರ್ಚ್ 27ರ ಶ್ರೀರಾಮನವಮಿಯಿಂದ ಏಪ್ರಿಲ್ 2ರ ಶ್ರೀ ಹನುಮಜ್ಜಯಂತಿಯವರೆಗೆ ಅಖಂಡ ಭಗವನ್ನಾಮಸಂಕೀರ್ತನೆಯೊಂದಿಗೆ ನಡೆಯಲಿದೆ.
27ರಂದು ಪ್ರಾತಃಕಾಲ ಭಗವನ್ನಾಮಸಂಕೀರ್ತನೆ ಪ್ರಾರಂಭ, ಏ.2ರ ಪ್ರಾತಃಕಾಲ ಮಂಗಲ, ಮಹಾಮಂಗಲಾರತಿ. ಏ.2ರಂದು ಬೆಳಗ್ಗೆ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ವೇ.ಮೂ.ಚಂದ್ರಶೇಖರ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಶ್ರೀಮದ್ರಾಮಾಯಣ ಮಹಾಯಜ್ಞ ಆರಂಭ, ನಾಗದೇವರಿಗೆ ಪಂಚಾಮೃತ ಅಭಿಷೇಕ, ನಾಗತಂಬಿಲ, ಬೆಳಗ್ಗೆ 11.30ಕ್ಕೆ ಶ್ರೀ ಗುರುದೇವಾನಂದ ಸ್ವಾಮೀಜಿ ಅವರಿಂದ ಧರ್ಮಸಂದೇಶ. ಮಧ್ಯಾಹ್ನ 12ರಿಂದ ಮಹಾಯಜ್ಞದ ಪೂರ್ಣಾಹುತಿ, ಮಹಾಪೂಜೆ, ಪ್ರಸಾದ ವಿತರಣೆ, ಮಹಾಸಂತರ್ಪಣೆ ನಡೆಯಲಿದೆ. ಮಧ್ಯಾಹ್ನ 2.30ರಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 7ರಿಂದ ಶ್ರೀ ಹನುಮದ್ವ್ರತ ಪೂಜೆ, ವಿಶೇಷ ಬೆಳ್ಳಿ ರಥೋತ್ಸವ ಉಯ್ಯಾಲೆ ಸೇವೆ ನಡೆಯಲಿದೆ ಎಂದು ಶ್ರೀ ಕ್ಷೇತ್ರದ ಪ್ರಕಟಣೆ ತಿಳಿಸಿದೆ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…