ಬಂಟ್ವಾಳ

ಜಿಲ್ಲಾ ಸಾಹಿತ್ಯ ಸಮ್ಮೇಳನ: ಬಂಟ್ವಾಳದಲ್ಲಿ ಕನ್ನಡ ಸಾಂಸ್ಕೃತಿಕ ದಿಬ್ಬಣ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ವತಿಯಿಂದ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯುವ ದಕ್ಷಿಣ ಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆ ಕನ್ನಡ ಸಾಂಸ್ಕೃತಿಕ ದಿಬ್ಬಣಕ್ಕೆ ಬಿ.ಸಿ.ರೋಡ್ ಪೊಳಲಿ ದ್ವಾರದ  ಬಳಿ ಗಣ್ಯರು ಬೆಳ್ಳಿಯ ರಥದಲ್ಲಿದ್ದ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಬಳಿಕ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ.ತುಕಾರಾಮ ಪೂಜಾರಿ ಕನ್ನಡ ಬಾವುಟವನ್ನು ಹಾರಿಸುವ ಮೂಲಕ ಚಾಲನೆ ನೀಡಿದರು. ಬಳಿಕ ರಥ ಸಮ್ಮೇಳನ ನಡೆಯುವ ಸ್ಥಳಕ್ಕೆ ಸಾಗಿತು.

ರಥದಲ್ಲಿ ಸಮ್ಮೇಳನ ಸರ್ವಾಧ್ಯಕ್ಷ ಹಿರಿಯ ಸಾಹಿತಿ, ಪತ್ರಕರ್ತ ಚಿದಂಬರ ಬೈಕಂಪಾಡಿ ಅವರೊಂದಿಗೆ ಕಸಾಪ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್, ದಿಬ್ಬಣ ಉದ್ಘಾಟಿಸಿದ ಪ್ರೊ.ತುಕಾರಾಮ ಪೂಜಾರಿ ಮತ್ತು ಕಸಾಪ ತಾಲೂಕು ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಉಪಸ್ಥಿತರಿದ್ದು, ಸಮ್ಮೇಳನ ನಡೆಯುವ ಸ್ಪರ್ಶ ಕಲಾ ಮಂದಿರದವರೆಗೂ ಸಾಗಿದರು.

ಕೊಂಬು, ಚೆಂಡೆ, ಸ್ಕೌಟ್ಸ್ ತಂಡ, ಕೀಲುಕುದುರೆ, ಬ್ಯಾಂಡ್, ಚಿಂಪಾಂಜಿ, ಡೊಳ್ಳು ಕುಣಿತ ಮೆರವಣಿಗೆಯಲ್ಲಿತ್ತು. ಕೊಡೆಗಳನ್ನು ಹಿಡಿದ ಮಹಿಳೆಯರು ಮೆರವಣಿಗೆಯಲ್ಲಿದ್ದರು.  ಕಾಸರಗೋಡು ಜಿಲ್ಲಾ ಕಸಾಪ ಅಧ್ಯಕ್ಷ ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಅಬುಬಕ್ಕರ್ ಅಮ್ಮುಂಜೆ, ಕಾರ್ಯದರ್ಶಿ ದೇವಪ್ಪ ಕುಲಾಲ್, ರಾಮದಾಸ ಬಂಟ್ವಾಳ ಮತ್ತು ಚಂದ್ರಹಾಸ ಶೆಟ್ಟಿ ಮಂಗಳೂರು, ಕೋಶಾಧಿಕಾರಿ ಸುಭಾಶ್ಚಂದ್ರ ಜೈನ್, ಮೂಲ್ಕಿ ತಾಲೂಕು ಕಸಾಪ ಅಧ್ಯಕ್ಷ ಮಿಥುನ್ ಉಡುಪ, ಪುತ್ತೂರು ತಾಲೂಕು ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಕಸಾಪ ತಾಲೂಕು ಗೌರವ ಕಾರ್ಯದರ್ಶಿಗಳಾದ ವಿ.ಸು.ಭಟ್, ರಮಾನಂದ ನೂಜಿಪ್ಪಾಡಿ, ಹೋಬಳಿ ಅಧ್ಯಕ್ಷರಾದ ಪಿ.ಮಹಮ್ಮದ್, ಗಣೇಶ ಪ್ರಸಾದ ಪಾಂಡೇಲು, ಸ್ವಾಗತ ಸಮಿತಿ ಪ್ರಮುಖರಾದ ಕೆ.ಕೆ.ಪೂಂಜ, ಸರಪಾಡಿ ಅಶೋಕ ಶೆಟ್ಟಿ, ಬೇಬಿ ಕುಂದರ್, ಪ್ರಭಾಕರ ಪ್ರಭು, ಎಚ್ಕೆ ನಯನಾಡು, ಅಬ್ಬಾಸ್ ಆಲಿ, ಪ್ರಮುಖರಾದ ಸುಕುಮಾರ್ ಬಂಟ್ವಾಳ, ಮಚ್ಚೇಂದ್ರ ಸಾಲಿಯಾನ್, ಶೇಷಪ್ಪ ಶೇಷಪ್ಪ ಮಾಸ್ಟರ ಮೆರವಣಿಗೆ ಸಂಚಾಲಕರಾದ ಉಮ್ಮರ್ ಮಂಚಿ, ಸಹಸಂಚಾಲಕರಾದ ನಾರಾಯಣ ಸಿ. ಪೆರ್ನೆ, ಬದ್ರುದ್ದೀನ್ ಮಂಚಿ ಸಹಿತ ನಾನಾ ಸಮಿತಿಗಳ ಪದಾಧಿಕಾರಿಗಳು ಪ್ರಮುಖರು ಉಪಸ್ಥಿತರಿದ್ದರು. ಬಳಿಕ ಸ್ಪರ್ಶ ಸಭಾಂಗಣದಲ್ಲಿ ಮೂರು ಮುತ್ತು ನಾಟಕ ಪ್ರದರ್ಶನಗೊಂಡಿತು. ರವೀಂದ್ರ ಕುಕ್ಕಾಜೆ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.