ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶ ಮೈಗೂಡಿಸಿ ಸಮಾಜ ಜಾಗೃತವಾಗಲಿ: ಡಾ. ಭಟ್

ನೀರಪಾದೆ ಬ್ರಹ್ಮ ಶ್ರೀ ನಾರಾಯಣ ಗುರುಗಳ ಚಿಂತನೆಗಳಿಗೆ ಪ್ರೇರಣೆ ನೀಡಿದ ಕೇಂದ್ರವಾಗಿದೆ, ಅವರ ತತ್ವ ಆದರ್ಶಗಳನ್ನು ಮೈಗೂಡಿಸಿಕೊಂಡು ಹಿಂದೂ ಸಮಾಜ ಜಾಗೃತವಾಗಬೇಕು,ಈ ನಿಟ್ಟಿನಲ್ಲಿ ನಿರ್ಮಾಣವಾದ ಮಂದಿರ ದೇಶವನ್ನು ಸಮಾಜವನ್ನು ಉಳಿಸುವ ಮಹತ್ಕಾರ್ಯ ಮಾಡಲಿ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.

ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ನೀರಪಾದೆ ಎಂಬಲ್ಲಿ ಮೇ.8 ರಿಂದ ಮೇ.10 ರವರೆಗೆ ನಡೆಯಲಿರುವ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರದ ಲೋಕಾರ್ಪಣೆ ಹಾಗೂ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಪ್ರತಿಷ್ಠಾ ಸಾನಿಧ್ಯ ಕಳಶಾಭಿಷೇಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು.

ನೀರಪಾದೆ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರ ಧಾರ್ಮಿಕ ಚಿಂತನೆಗಳನ್ನು ಬೆಳೆಸುವ ಕೇಂದ್ರವಾಗಲಿ ಎಂದು ಆಶಿಸಿದ ಅವರು. ಸಾಮಾನ್ಯ ಜನರು ದಾರಿ ತಪ್ಪುವ ಅ ಕಾಲಘಟ್ಟದಲ್ಲಿ   ಮತಾಂತರಕ್ಕೆ ಆಸ್ಪದ ನೀಡದೆ, ಜನರಿಗೆ ಧೈರ್ಯ ಮತ್ತು ವಿಶ್ವಾಸ ಮೂಡಿಸಿ ಹಿಂದೂ ಸಮಾಜವನ್ನು ಜಾಗೃತಗೊಳಿಸಿರುವ ಕೆಲಸವನ್ನು ನಾರಾಯಣ ಗುರುಗಳು ಮಾಡಿದ್ದಾರೆ ಎಂದು ಅವರು ಹೇಳಿದರು.

ಜಾಹೀರಾತು

ಬ್ರಹ್ಮಶ್ರೀ ನಾರಾಯಣ ಗುರು ಇದರ ಸೇವಾ ಟ್ರಸ್ಟ್ (ರಿ.) ಗೌರವಾಧ್ಯಕ್ಷ ಎ.ರುಕ್ಮಯ ಪೂಜಾರಿ ಮಾತನಾಡಿ, ನೀರಪಾದೆ ಪರಿಸರದ ಜನರಲ್ಲಿ ಸಂಸ್ಕಾರವಿದೆ ಎಂಬುದಕ್ಕೆ ಅನೇಕ ಸಂದರ್ಭಗಳು ಸಾಕ್ಷಿಯಾಗಿವೆ. ಮಂದಿರ ಲೋಕಾಪರ್ಣೆಗೆ ಸಿದ್ದವಾಗಿದ್ದು, ಮುಂದಿನ ದಿನಗಳಲ್ಲಿ ಉತ್ತಮ ರೀತಿಯಲ್ಲಿ ನಡೆಸಿಕೊಂಡು ಹೋದರೆ ಸಾರ್ಥಕತೆ ಪ್ರಾಪ್ತಿಯಾಗುತ್ತದೆ, ಹಿರಿಯರ ಕನಸು ನನಸಾಗುತ್ತದೆ ಎಂದು ಹೇಳಿದರು.

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಟ್ರಸ್ಟ್ ಅಧ್ಯಕ್ಷ ನಿಡ್ಯೆ ನಾರಾಯಣ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟಿ ಹಾಗೂ ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಜಯರಾಮ ಕಲ್ಲಾಪು, ಮಹಿಳಾ ಸಮಿತಿ ಅಧ್ಯಕ್ಷೆ ಮಲ್ಲಿಕಾ ಸೇಣೆರೆಕೋಡಿ, ಗ್ರಾ.ಪಂ.ಮಾಜಿ ಅಧ್ಯಕ್ಷ ಚಂದ್ರಶೇಖರ ಚೆಂಡೆ, ಗ್ರಾ.ಪಂ.ಮಾಜಿ ಸದಸ್ಯ, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ ಶಿವರಾಜ್ ಕಾಂದಿಲ, ರಾಧಾಕೃಷ್ಣ ಅಡ್ಯಂತಾಯ, ಮಹಿಳಾ ಸಮಿತಿ ಗೌರವ ಅಧ್ಯಕ್ಷೆ ಮೀನಾಕ್ಷಿ,ಯಶೋಧ ನಿಡ್ಯೆ, ಶಶಿಕಲಾ, ಮುಖ್ಯೋಪಾಧ್ಯಾಯಿನಿ ಜಯಶ್ರೀ ಯಸ್.ಔದಿ, ಶಿಕ್ಷಕರಾದ ಉದಯ ಕುಮಾರ್, ಸಂತೋಷ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಟ್ರಸ್ಟ್‌ ಕಾರ್ಯದರ್ಶಿ ಮೋಹನ್ ಪಿ.ಎಸ್.ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಿತಿ ಉಪಾಧ್ಯಕ್ಷ ಶರತ್ ಕುಮಾರ್ ಸೇಣೆರೆಕೋಡಿ ಸ್ವಾಗತಿಸಿ, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಸುರೇಶ್ ಶೆಟ್ಟಿ ಕಾಂದಿಲ ವಂದಿಸಿದರು. ಅಶೋಕ್ ಗಣೇಶ್ ನಗರ ಹಾಗೂ ಜಗದೀಶ್ ಕಲ್ಲಡ್ಕ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶ ಮೈಗೂಡಿಸಿ ಸಮಾಜ ಜಾಗೃತವಾಗಲಿ: ಡಾ. ಭಟ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*