press meet
ಬಂಟ್ವಾಳ ತಾಲೂಕಿನ ಮೂಡನಡುಗೋಡು ಗ್ರಾಮದ ದಡ್ಡಲಕಾಡು ದೇವಿನಗರದಲ್ಲಿ ಶ್ರೀ ಜಗದಂಬಿಕಾ ಶ್ರೀ ಮಹಮ್ಮಾಯಿ ಗುಳಿಗ ಅಣ್ಣಪ್ಪ ಕ್ಷೇತ್ರ ಸೇವಾ ಸಮಿತಿ ವತಿಯಿಂದ ನವೀಕರಣ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ಶ್ರೀ ಚಂಡಿಕಾಯಾಗ ಹಾಗೂ ಸಪರಿವಾರ ದೇವರ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮಗಳು ಸೋಮವಾರ ಆರಂಭಗೊಂಡಿದ್ದು, ಏ.4ರ ಶನಿವಾರದವರೆಗೆ ನಡೆಯಲಿದೆ.
ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸೋಮವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಮದಾಸ ಬಂಟ್ವಾಳ ಈ ವಿಷಯ ತಿಳಿಸಿದರು.
ಕಾರ್ಯಕ್ರಮದ ಯಶಸ್ಸಿಗೆ ಹಲವು ಸಮಿತಿಗಳನ್ನು ರಚಿಸಲಾಗಿದ್ದು ಕಾರ್ಯಕರ್ತರು ಅಹರ್ನಿಶಿ ದುಡಿಯುತ್ತಿದ್ದಾರೆ. ಪ್ರತಿದಿನ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿದ್ದು, ಏಪ್ರಿಲ್ 2ರಂದು ಬೆಳಗ್ಗೆ 9.40ರ ವೃಷಭ ಲಗ್ನದ ಶುಭ ಮುಹೂರ್ತದಲ್ಲಿ ಶ್ರೀದೇವರ ಬಿಂಬ ಪುನಃಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ, ಜೀವಕಲಶಾಭಿಷೇಕ, ಪರಿವಾರ ದೇವತಾ ಕಲಶಾಭಿಷೇಕ ನಡೆಯಲಿದೆ. ಅಂದು ಮಧ್ಯಾಹ್ನ ನಡೆಯಲಿರುವ ಸುಧರ್ಮ ಸಭೆಗೆ ಡಾ. ಮಹರ್ಷಿ ಆನಂದ ಗುರೂಜಿ ಆಗಮಿಸುವರು. ಶಾಸಕ ರಾಜೇಶ್ ನಾಯ್ಕ್, ಸಂಸದ ಬ್ರಿಜೇಶ್ ಚೌಟ, ಸಹಿತ ಗಣ್ಯರು ಪಾಲ್ಗೊಳ್ಳುವರು ಎಂದರು. ಸುದ್ದಿಗೋಷ್ಠಿಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಧರ್ಣಪ್ಪ ಪೂಜಾರಿ, ಸಾಂಸ್ಕೃತಿಕ ಸಮಿತಿ ಸಂಚಾಲಕ ದಾಮೋದರ ಡಿ. ದೇವಿನಗರ ಉಪಸ್ಥಿತರಿದ್ದರು.
ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳಲ್ಲಿ ಏಪ್ರಿಲ್ 2ರಂದು ನಡೆಯುವ ಕಾರ್ಯಕ್ರಮಗಳು ಇವು. (more…)