ಬಂಟ್ವಾಳ ತಾಲೂಕು ಕಚೇರಿಯಲ್ಲಿ ಭಗವಾನ್ ವರ್ಧಮಾನ ಮಹಾವೀರ ಜಯಂತಿ ಆಚರಣೆ

VARDHAMANA JAYANTI

ಬಂಟ್ವಾಳ: ವರ್ಧಮಾನ ಮಹಾವೀರ ಸಂದೇಶದಲ್ಲಿ ಸತ್ಯ, ಅಹಿಂಸೆ ಅಡಗಿದೆ, ಯಾರೂ ಕೀಳಲ್ಲ, ಮೇಲಲ್ಲ ಎಂಬ ಮಾತನ್ನು ಸಾರಿ ಹೇಳಿದ್ದಾರೆ, ಅವರ ಸಂದೇಶ ಇಂದಿನ ದಿನಗಳಲ್ಲಿ ಪ್ರಸ್ತುತವಾಗಿದೆ ಎಂದು ಬಂಟ್ವಾಳದ ನ್ಯಾಯವಾದಿ ಶಿವಪ್ರಕಾಶ್ ಹೆಗ್ಡೆ ಹೇಳಿದರು.

BANTWAL

ತಾಲೂಕು ಕಚೇರಿಯ ಸಭಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಜೈನ್ ಮಿಲನ್ ಸಹಯೋಗದೊಂದಿಗೆ ಸೋಮವಾರ ನಡೆದ ಭಗವಾನ್ ವರ್ಧಮಾನ ಮಹಾವೀರ ಜಯಂತಿ ಆಚರಣೆಯಲ್ಲಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ತಹಸೀಲ್ದಾರ್ ಮಂಜುನಾಥ್ ಮಾತನಾಡಿ, ಎರಡು ಸಾವಿರ ವರ್ಷಗಳ ನಂತರವೂ ಮಹಾವೀರರನ್ನು ಸ್ಮರಿಸಬೇಕೆಂದರೆ ಅವರ ತತ್ವಾದರ್ಶಗಳೇ ಕಾರಣ ಎಂದರು.

ಜಾಹೀರಾತು

ಜೈನ್ ಮಿಲನ್ ಬಂಟ್ವಾಳ ಅಧ್ಯಕ್ಷ ರಾಜೇಂದ್ರ ಜೈನ್ ಮಾತನಾಡಿ, ಸರಕಾರಿ ವ್ಯವಸ್ಥೆಯಡಿ ಕಾರ್ಯಕ್ರಮಗಳು ನಡೆಯುತ್ತಿರುವುದು ಶ್ಲಾಘನೀಯ ಇದನ್ನು ಇನ್ನಷ್ಟು ವಿಜೃಂಭಣೆಯಿಂದ ಆಚರಿಸುವಂತಾಗಲಿ ಎಂದರು.

ಜೈನ್ ಮಿಲನ್ ವಲಯ ಉಪಾಧ್ಯಕ್ಷ ಸುದರ್ಶನ ಜೈನ್ ಮಾತನಾಡಿ, ಭಗವಾನ್ ಮಹಾವೀರನ ಸಂದೇಶವಾದ ಅಹಿಂಸೆಯ ತತ್ವಗಳೇ ಸ್ವಾತಂತ್ರ್ಯ ಹೋರಾಟಕ್ಕೆ ಸ್ಫೂರ್ತಿಯಾಗಿದ್ದನ್ನು ಸ್ಮರಿಸಿದರು.

ಈ ಸಂದರ್ಭ ಜೈನ್ ಮಿಲನ್  ಬಂಟ್ವಾಳ ಕಾರ್ಯದರ್ಶಿ ಜಯಕೀರ್ತಿ ಜೈನ್, ವಿಭಾಗ ಕಾರ್ಯದರ್ಶಿ ಸುಭಾಶ್ಚಂದ್ರ ಜೈನ್,  ಪ್ರಮುಖರಾದ ಮಾಣಿಕ್ಯರಾಜ್ ಜೈನ್, ವಿಜಯಕುಮಾರಿ ಇಂದ್ರ, ದೀಪಕ್ ಕುಮಾರ್ ಜೈನ್, ಸನ್ಮತಿ ಜಯಕೀರ್ತಿ,  ಮಮತಾ ಸುಭಾಶ್ಚಂದ್ರ ಜೈನ್,  ದೀಪಕ್ ಇಂದ್ರ ಪಾಣೆಮಂಗಳೂರು, ಉಪತಹಸೀಲ್ದಾರ್ ನರೇಂದ್ರನಾಥ ಮಿತ್ತೂರು ಸಹಿತ ನಾನಾ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. ಬಂಟ್ವಾಳ ಉಪತಹಸೀಲ್ದಾರ್ ನವೀನ್ ಬೆಂಜನಪದವು ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳ ತಾಲೂಕು ಕಚೇರಿಯಲ್ಲಿ ಭಗವಾನ್ ವರ್ಧಮಾನ ಮಹಾವೀರ ಜಯಂತಿ ಆಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*