ಜಗತ್ತಿಗೆ ಅಮೃತವನ್ನು ನೀಡಿದ ದೇವರು ಈಶ್ವರ: ಪದ್ಯಾಣದಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥರು

ವಿಷವನ್ನು ಪಾನ ಮಾಡಿ, ಜಗತ್ತಿಗೆ ಅಮೃತವನ್ನು ನೀಡಿದ ದೇವರು ಈಶ್ವರ. ಜಗದ್ಗುರು ಮಧ್ವಾಚಾರ್ಯರು ರುದ್ರದೇವನನ್ನು ಗುರುತಿಸಿ, ಮುಖ ಐದು, ಹೃದಯ ಒಂದು ಎಂದು ಹೇಳಿದ್ದಾರೆ.

ಏಕಮನಸ್ಕರಾಗಿ ಕ್ಷೇತ್ರಕ್ಕೆ ಬಂದರೆ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದು ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ನುಡಿದರು.
ಪದ್ಯಾಣ ಶ್ರೀ ಮಹಾಲಿಂಗೇಶ್ವರ ಕ್ಷೇತ್ರದಲ್ಲಿ ನಡೆಯುತ್ತಿರುವ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮದ ಹಿನ್ನೆಲೆ ಬುಧವಾರ ಕ್ಷೇತ್ರಕ್ಕೆ ಭೇಟಿ ನೀಡಿ ಆಶೀರ್ವಚನ ನೀಡಿದರು.
ಪದ್ಯಾಣಕ್ಕೂ ತಮಗೂ ಇರುವ ನಂಟನ್ನು ಹೇಳಿದ ಅವರು ಕ್ಷೇತ್ರದಲ್ಲಿ ನಡೆಯುತ್ತಿರುವ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯಲಿ, ಬದುಕಿನಲ್ಲಿ ಬರುವ ಕಷ್ಟಗಳು ದೂರವಾಗಲಿ ಎಂದು ಹಾರೈಸಿದರು.


ಇದಕ್ಕೂ ಮೊದಲು ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಪದ್ಯಾಣ ರಘುರಾಮ ಕಾರಂತ ಅವರು ರುದ್ರಾಕ್ಷಿಮಾಲೆಯನ್ನು ಶ್ರೀಗಳಿಗೆ ಅರ್ಪಿಸಿದರು. ಆಡಳಿತ ಮೊಕ್ತೇಸರ ಸತ್ಯನಾರಾಯಣ ಭಟ್ ಸೇರಾಜೆ ಮತ್ತು ಉಷಾ ಸತ್ಯನಾರಾಯಣ ದಂಪತಿ ಶ್ರೀಗಳಿಗೆ ರುದ್ರಾಕ್ಷಿ ಗಿಡವನ್ನು ಸಮರ್ಪಿಸಿ ಸ್ವಾಗತಿಸಿದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ ಪದ್ಯಾಣ ಶ್ರೀ ಮಹಾಲಿಂಗೇಶ್ವರನ ಅನುಗ್ರಹ ಸರ್ವರಿಗೂ ದೊರಕಲಿ ಎಂದು ಶುಭ ಹಾರೈಸಿದರು.
ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಸೇರಾಜೆ ಗೋಪಾಲಕೃಷ್ಣ ಭಟ್ ಸ್ವಾಗತಿಸಿ ಕ್ಷೇತ್ರಕ್ಕೂ ಶ್ರೀಗಳಿಗೂ ಇರುವ ಸಂಬAಧವನ್ನು ತಿಳಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಶ್ಯಾಮಸುದರ್ಶನ ಹೊಸಮೂಲೆ, ಸಂಘಟನಾ ಕಾರ್ಯದರ್ಶಿ ಶಿವಪ್ರಸಾದ ಶೆಟ್ಟಿ ಅನೆಯಾಲಗುತ್ತು, ಕಾರ್ಯದರ್ಶಿ ಕೃಷ್ಣ ಎಂ.ಆರ್. ಕಡಬ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅರವಿಂದ ಪದ್ಯಾಣ, ಕಾರ್ಯದರ್ಶಿ ಈಶಾನ್ಯ ಪದ್ಯಾಣ, ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ಆರ್. ಚೆನ್ನಪ್ಪ ಕೋಟ್ಯಾನ್, ಉಪಾಧ್ಯಕ್ಷ ಸುದರ್ಶನ ಬಜ, ಬಿಜೆಪಿ ರಾಜ್ಯ ಮುಖಂಡ ವಿಕಾಸ್ ಪುತ್ತೂರು, ಮುಗುಳಿ ತಿರುಮಲೇಶ್ವರ ಭಟ್ ಸಹಿತ ಬ್ರಹ್ಮಕಲಶೋತ್ಸವ, ಜೀರ್ಣೋದ್ಧಾರ, ದೇವಸ್ಥಾನದ ಸಮಿತಿಗಳ ಪದಾಧಿಕಾರಿಗಳು, ಪ್ರಮುಖರು ಉಪಸ್ಥಿತರಿದ್ದರು. ನವ್ಯ ಕೃಷ್ಣ ಮಾಣಿಪ್ಪಾಡಿ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಜಗತ್ತಿಗೆ ಅಮೃತವನ್ನು ನೀಡಿದ ದೇವರು ಈಶ್ವರ: ಪದ್ಯಾಣದಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥರು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*