ಏ. 4ರಂದು ಆತ್ಮಿ ಶೆಟ್ಟಿ ಭರತನಾಟ್ಯ ರಂಗಪ್ರವೇಶ

ಬಂಟ್ವಾಳ : ಕಲಾನಿಕೇತನ ಡ್ಯಾನ್ಸ್ ಫೌಂಡೇಶನ್ (ರಿ) ಕಲ್ಲಡ್ಕ, ಭರತನಾಟ್ಯ ಸಂಸ್ಥೆಯ ವಿದ್ಯಾರ್ಥಿನಿ ಕುಮಾರಿ ಆತ್ಮಿ ಶೆಟ್ಟಿ ಇವರ ಭರತನಾಟ್ಯ ರಂಗ ಪ್ರವೇಶ ಕಾರ್ಯಕ್ರಮವು ಇದೇ ಬರುವ ಎಪ್ರಿಲ್ 4 ರ ಸಂಜೆ ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ನಡೆಯಲಿದೆ ಎಂದು ನೃತ್ಯಗುರು ವಿದುಷಿ ವಿದ್ಯಾ ಮನೋಜ್ ಹೇಳಿದ್ದಾರೆ.

ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆತ್ಮಿ ಶೆಟ್ಟಿ ಯವರು 12 ವರ್ಷಗಳಿಂದ ನನ್ನ ಬಳಿ ಭರತನಾಟ್ಯ ಅಭ್ಯಾಸವನ್ನು ಮಾಡುತ್ತಿದ್ದು ವಿದ್ವತ್ ಅಂತಿಮ ಪರೀಕ್ಷೆಯ ತಯಾರಿಯಲ್ಲಿದ್ದಾರೆ. ಹಲವು ಪ್ರತಿಷ್ಠಿತ ವೇದಿಕೆಗಳಲ್ಲಿ ಕಾರ್ಯಕ್ರಮಗಳನ್ನು ನೀಡಿದ್ದು, ಜನಮನ್ನಣೆಯನ್ನು ಗಳಿಸಿರುವಂತಹ ಉದಯೋನ್ಮುಖ ಕಲಾವಿದೆಯಾಗಿದ್ದಾರೆ ಎಂದರು.

ಈ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ನೃತ್ಯಗುರು ಶಾಂತಲಾ ಪ್ರಶಸ್ತಿ ಪುರಸ್ಕೃತರಾದ ಉಳ್ಳಾಲ ಮೋಹನ್ ಕುಮಾರ್, ಪುತ್ತೂರು ವಿಶ್ವಕಲಾನಿಕೇತನ ಸಂಸ್ಥೆಯ ನಿರ್ದೇಶಕಿ ಗುರು ವಿದುಷಿ ನಯನ ವಿ.ರೈ, ನೃತ್ಯಗಿರಿ ಮೈಸೂರು ಭರತನಾಟ್ಯ ಸಂಸ್ಥೆಯ ನಿರ್ದೇಶಕರಾದ ಡಾ. ಕೃಪಾ ಪಡ್ಕೆ, ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಪಟ್ಲ ಸತೀಶ್ ಶೆಟ್ಟಿ, ಉದ್ಯಮಿ ಚಂದ್ರಹಾಸ ಡಿ. ಶೆಟ್ಟಿ ಇವರು ಭಾಗವಹಿಸಲಿದ್ದಾರೆ ಎಂದರು.

ಜಾಹೀರಾತು

ಹಿಮ್ಮೇಳ ಕಲಾವಿದರಾಗಿ ನಟುವಾಂಗದಲ್ಲಿ ಗುರು ವಿದುಷಿ ಶ್ರೀಮತಿ ವಿದ್ಯಾ ಮನೋಜ್, ಹಾಡುಗಾರಿಕೆಯಲ್ಲಿ ವಿದ್ವಾನ್ ನಂದಕುಮಾರ್ ಉನ್ನಿಕೃಷ್ಣನ್ ಬೆಂಗಳೂರು, ಮೃದಂಗ ವಾದನದಲ್ಲಿ ವಿದ್ವಾನ್ ಕಾರ್ತಿಕ್ ವೈದಾತ್ರಿ ಬೆಂಗಳೂರು, ಕೊಳಲು ವಾದನದಲ್ಲಿ ವಿದ್ವಾನ್ ನಿತೀಶ್ ಅಮ್ಮಣ್ಣಾಯ ಬೆಂಗಳೂರು, ವೀಣಾ ವಾದನದಲ್ಲಿ ವಿದ್ವಾನ್ ಗೋಪಾಲ್ ವೆಂಕಟರಮಣ ಬೆಂಗಳೂರು ಇವರು ಸಹಕರಿಸಲಿದ್ದಾರೆ ಎಂದು ಅವರು ವಿವರಿಸಿದರು
ಭರತನಾಟ್ಯ ವಿದ್ಯಾರ್ಥಿನಿ ಕು.ಆತ್ಮಿಶೆಟ್ಟಿ ಮಾತನಾಡಿ, ನನ್ನ ರಂಗಪ್ರವೇಶ ನನ್ನ ಹೆತ್ತವರ ಕನಸು, ಗುರುಗಳ ಪ್ರೋತ್ಸಾಹ ಮತ್ತು ಪ್ರೇರಣೆಯಿಂದ ರಂಗಪ್ರವೇಶಕ್ಕೆ ಅಣಿಯಾಗಿದ್ದೇನೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಉದಯ ಕುಮಾರ್ ಶೆಟ್ಟಿ , ಶಾಲಿನಿ ಶೆಟ್ಟಿ, ಮಾವ ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಏ. 4ರಂದು ಆತ್ಮಿ ಶೆಟ್ಟಿ ಭರತನಾಟ್ಯ ರಂಗಪ್ರವೇಶ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*