
ಸಾನಿಧ್ಯದಲ್ಲಿ ಚೈತನ್ಯವೃದ್ಧಿಯಿಂದ ಹೆಚ್ಚಿನ ಫಲ ಪುನರ್ ಪ್ರತಿಷ್ಟೆ, ಬ್ರಹ್ಮಕಲಶೋತ್ಸವದಿಂದ ಆಗುತ್ತದೆ ಎಂದು ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ನುಡಿದರು.
ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.
ಭಕ್ತರ ಮನಸುಗಳಿಗೆ ಹೊಸತನ ಬೇಕಾಗುತ್ತದೆ. ಹೀಗಾಗಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಆಯೋಜನೆಯಾಗುತ್ತದೆ. ದೇವಸ್ಥಾನದ ಬ್ರಹ್ಮಕಲಶೋತ್ಸವ ನೆಪದಲ್ಲಿ ಭಕ್ತರ ಮನಸ್ಸುಗಳು ಒಂದಾಗುತ್ತದೆ ಎಂದರು.
ಬೆಂಗಳೂರು ಉದ್ಯಮಿ ಆರ್.ಕೆ. ಭಟ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ.ಅರುಣಶ್ಯಾಮ, ಕಾರ್ಯಾಧ್ಯಕ್ಷ ಶ್ಯಾಮಸುದರ್ಶನ ಹೊಸಮೂಲೆ, ಆಡಳಿತ ಮೊಕ್ತೇಸರ ಸತ್ಯನಾರಾಯಣ ಭಟ್ ಸೇರಾಜೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅರವಿಂದ ಪದ್ಯಾಣ, ಗೌರವಾಧ್ಯಕ್ಷರಾದ ಪದ್ಯಾಣ ರಘುರಾಮ ಕಾರಂತ, ಪದ್ಯಾಣ ತಿರುಮಲೇಶ್ವರ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಸೇರಾಜೆ ಗೋಪಾಲಕೃಷ್ಣ ಭಟ್, ಸಂಘಟನಾ ಕಾರ್ಯದರ್ಶಿ ಶಿವಪ್ರಸಾದ್ ಕೆಟ್ಟ ಅನೆಯಾಲಗುತ್ತು ಕಾರ್ಯದರ್ಶಿ ಕೃಷ್ಣ ಎಂ.ಆರ್. ಕಡಬ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಈಶಾನ್ಯ ಪದ್ಯಾಣ ಮತ್ತಿತರರು ಉಪಸ್ಥಿತರಿದ್ದರು. ಆಡಳಿತ ಮೊಕ್ತೇಸರ ಸತ್ಯನಾರಾಯಣ ಭಟ್ ಸೇರಾಜೆ ಸ್ವಾಗತಿಸಿದರು. ಶರತ್ ಭಟ್ ಸೇರಾಜೆ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಕೃಷ್ಣ ಎಂ.ಆರ್. ಕಡಬ ವಂದಿಸಿದರು.


Be the first to comment on "ಬ್ರಹ್ಮಕಲಶೋತ್ಸವದಿಂದ ಹೆಚ್ಚಿನ ಫಲಪ್ರಾಪ್ತಿ: ಶ್ರೀ ರಾಘವೇಶ್ವರ ಸ್ವಾಮೀಜಿ"