ಬಂಟ್ವಾಳ: ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಬಿ.ಮೂಡ ಸರಕಾರಿ ಪದವಿಪೂರ್ವ ಕಾಲೇಜಿನ 264 ವಿದ್ಯಾರ್ಥಿಗಳುಹಾಜರಾಗಿದ್ದು, 243 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡಾ 92.05 ಫಲಿತಾಂಶ ಪಡೆದಿರುತ್ತದೆ.
54 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿರುತ್ತಾರೆ. ಕಲಾ ವಿಭಾಗದಲ್ಲಿ 72 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 60 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ 142 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 134 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ 50 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 49 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಕಲಾ ವಿಭಾಗದಲ್ಲಿ ಹೇಮಶ್ರೀ 562 ಅಂಕಗಳು, ವಾಣಿಜ್ಯ ವಿಭಾಗದಲ್ಲಿ ಭವಿತ್ 579 ಅಂಕಗಳು ಮತ್ತು ವಿಜ್ಞಾನ ವಿಭಾಗದಲ್ಲಿ ಪ್ರೇಕ್ಷಾ 576 ಅಂಕಗಳನ್ನು ಪಡೆದು ಸಾಧನೆ ಮಾಡಿರುತ್ತಾರೆ.