ದ್ವಿತೀಯ ಪಿಯುಸಿ: ಮಗಳೊಂದಿಗೆ ಅಮ್ಮನಿಗೂ ಪಾಸ್ ಆದ ಖುಷಿ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು ಎಲ್ಲೆಡೆ ವಿದ್ಯಾರ್ಥಿಗಳ ಫಲಿತಾಂಶದ ಕಲರವ ಕೇಳುತ್ತಿರುವಾಗ ಬಂಟ್ವಾಳ ನಿವಾಸಿಗಳಾದ ಅಮ್ಮ ಮತ್ತು ಮಗಳು ಏಕಕಾಲದಲ್ಲಿ ಉತ್ತೀರ್ಣರಾಗುವ ಮೂಲಕ ಸಾಧನೆ ಮಾಡಿದ್ದಾರೆ.

ಬಿ.ಸಿ.ರೋಡಿನ ಕೈಕಂಬ ನಿವಾಸಿ ಗೃಹಿಣಿ ನೇತ್ರಾವತಿ ವಿ.ಆರ್ ಹಾಗೂ ಮಗಳು ಹೇಮಶ್ರೀ ಆರ್. ತೇರ್ಗಡೆಯಾದ ಸಂತಸದಲ್ಲಿರುವ ತಾಯಿ, ಮಗಳು. ಹೇಮಶ್ರೀ ಬಿ.ಮೂಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ 562 ಅಂಕ ಗಳಿಸುವ ಮೂಲಕ ಕಾಲೇಜಿಗೆ ಟಾಪರ್ ಆಗಿ ಮೂಡಿಬಂದಿದ್ದಾರೆ.

ನಂದಾವರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ರವಿಕುಮಾರ್ ಅವರ ಪತ್ನಿ ನೇತ್ರಾವತಿ ಅವರು ಪಿಯುಸಿ ತೇರ್ಗಡೆಯಾಗುವ ಹಂಬಲ ಹೊಂದಿದ್ದು, ಕಾಲಕೂಡಿ ಬಂದಿರಲಿಲ್ಲ. ಮಗಳು ಬಿ.ಮೂಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕಲಿಯುತ್ತಿರುವ ಸಂದರ್ಭ ತಾನೂ ಪರೀಕ್ಷೆ ಬರೆಯುವ ಮನಸ್ಸು ಮಾಡಿದರು. ಪತಿಯ ಪ್ರೋತ್ಸಾಹ, ಕಾಲೇಜಿನ ಉಪನ್ಯಾಸಕರ ಬೆಂಬಲದಿಂದ ತಾಯಿ, ಮಗಳು ಇಬ್ಬರೂ ಪರೀಕ್ಷೆಗೆ ಕುಳಿತರು. ಹಾಲ್ ಟಿಕೇಟ್ ಬಂದಾಗ ಪರೀಕ್ಷಾ ಕೇಂದ್ರ ಮೊಂಟೆಪದವು ನೇತ್ರಾವತಿ ಅವರಿಗೆ ದೊರಕಿತು.

ಜಾಹೀರಾತು

ಸರಕಾರಿ ಪದವಿಪೂರ್ವ ಕಾಲೇಜು ಮೊಂಟೆಪದವು ಮೂಲಕ ಪರೀಕ್ಷೆಗೆ ಹಾಜರಾಗಿದ್ದ ಇವರು ತನ್ನ ಪ್ರಥಮ ಪ್ರಯತ್ನದಲ್ಲೇ  ಕಲಾ ವಿಭಾಗದಲ್ಲಿ ಉತ್ತೀರ್ಣರಾಗಿದ್ದು 257 ಅಂಕಗಳನ್ನು ಪಡೆದಿರುತ್ತಾರೆ.

ಮಗಳು ಹೇಮಶ್ರೀ ಆರ್ ಈ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 562 ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಕಾಲೇಜಿಗೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ಪತ್ನಿ ಮತ್ತು ಮಗಳು ಏಕಕಾಲದಲ್ಲಿ ಉತ್ತೀರ್ಣರಾದ ಸಂತಸವನ್ನು ನಂದಾವರ ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ರವಿಕುಮಾರ್ ಮಾಧ್ಯಮದ ಜೊತೆ ಹಂಚಿಕೊಂಡರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ದ್ವಿತೀಯ ಪಿಯುಸಿ: ಮಗಳೊಂದಿಗೆ ಅಮ್ಮನಿಗೂ ಪಾಸ್ ಆದ ಖುಷಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*