ಕಲ್ಲಡ್ಕ

ಹಿರಿಯರ ಆದರ್ಶಗಳು ನಂದಾದೀಪ: ಡಾ ಪ್ರಭಾಕರ ಭಟ್ ಕಲ್ಲಡ್ಕ

ಹಿರಿಯ ಅದರ್ಶಗಳು ನಂದಾದೀಪ ಆಗಬೇಕು ಸಾಧಕರ ನೂರು ಹೆಜ್ಜೆಗಳಲ್ಲಿ ಒಂದು ಹೆಜ್ಜೆಯನ್ನಾದರೂ ಅನುಸರಿಸಿ ಸಾರ್ಥಕತೆ ಪಡೆಯೋಣ ಎಂದು  ಪುತ್ತೂರು ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ ಕೆ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು

ಅವರು ಎ.11ರ ಶನಿವಾರ ಕಲ್ಲಡ್ಕ ಸಮೀಪದ ಜೀವೆ ನೀರಕೋಡಿಯಲ್ಲಿ ಇತ್ತೀಚೆಗೆ ನಿಧನರಾದ ಕಲ್ಲಡ್ಕ ಶ್ರೀರಾಮ ವಿದ್ಯಾ ಸಂಸ್ಥೆಯ ನಿವೃತ್ತ ಹಿಂದಿ ಶಿಕ್ಷಕ ಗೋವಿಂದ ಭಟ್ ಅವರಿಗೆ ನುಡಿನಮನ ಸಲ್ಲಿಸಿ ಮಾತನಾಡಿದರು.

ಸಂಘ ಪರಿವಾರದ ಹಿರಿಯ ಮುಖಂಡ ರಾಧಾಕೃಷ್ಣ ಅಡ್ಯಂತಾಯ, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ವಸಂತ ಮಾಧವ, ರಮೇಶ್ ಕಲ್ಲಡ್ಕ, ಮಹೇಶ್ ಭಟ್ ಕಜೆ ಮೊದಲಾದವರು ಮಾತನಾಡಿದರು. ಡಾ ಕಮಲಾ ಪ್ರಭಾಕರ ಭಟ್, ಸಂಘ ಪರಿವಾರದ ಪ್ರಮುಖರು, ಶ್ರೀರಾಮ ವಿದ್ಯಾಸಂಸ್ಥೆಯವರು, ದಿವಂಗತ ಗೋವಿಂದ ಭಟ್ ಅವರ ಒಡನಾಡಿಗಳು ,ಹಿತೈಷಿಗಳು, ಸಹೋದ್ಯೋಗಿಗಳು, ಬಂಧುಗಳು ,ಕುಟುಂಬದವರು ಉಪಸ್ಥಿತರಿದ್ದರು. ಶ್ರೇಯಸ್ ಕಲ್ಲಡ್ಕ ಸ್ವಾಗತಿಸಿದರು. ರಾಜೇಶ್ ಕಲ್ಲಡ್ಕ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ದಿವಂಗತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಬಳಿಕ ಸಹಭೋಜನ ನಡೆಯಿತು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.