ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಬೆಂಜನಪದವು ಸರ್ಕಾರಿ ಪದವಿಪೂರ್ವ ಕಾಲೇಜಿನ 48 ವಿದ್ಯಾರ್ಥಿಗಳು ಹಾಜರಾಗಿದ್ದು,,46 ವಿದ್ಯಾರ್ಥಿಗಳು ತೇರ್ಗಡೆಯಾಗಿ 95.83% ಫಲಿತಾಂಶ ದಾಖಲಿಸಿದ್ದಾರೆ.
10 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದು,22 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.ವಾಣಿಜ್ಯ ವಿಭಾಗದ 26 ವಿದ್ಯಾರ್ಥಿಗಳಲ್ಲಿ 25 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 96.15% ದಾಖಲಿಸಿದ್ದಾರೆ. 7 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದು,ಫಾತಿಮತ್ ಶಲ್ಬಾನಾ 581 ಅಂಕಗಳೊಂದಿಗೆ ಪ್ರಥಮ ಸ್ಥಾನ ಹಾಗೂ ಧನುಶ್ರೀ 560 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಕಲಾ ವಿಭಾಗದಲ್ಲಿ 12 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,ಎಲ್ಲ ವಿದ್ಯಾರ್ಥಿಗಳೂ ತೇರ್ಗಡೆಯಾಗಿ 100% ಫಲಿತಾಂಶ ದಾಖಲಿಸಿದ್ದಾರೆ.

600/581
96.8%
ಕೆ.ನಾಫಿಯಾ ಮರಿಯಂ 558 ಅಂಕಗಳೊಂದಿಗೆ ಪ್ರಥಮ ಸ್ಥಾನ, ಮಿಸ್ಬಾ 499 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ.ವಿಜ್ಞಾನ ವಿಭಾಗದ 12 ವಿದ್ಯಾರ್ಥಿಗಳಲ್ಲಿ 11 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು 91.66% ದಾಖಲಿಸಿದ್ದಾರೆ.ಇಬ್ಬರು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಗಳಿಸಿದ್ದು ನಿನಾದ್ 566 ಅಂಕಗಳೊಂದಿಗೆ ಪ್ರಥಮ ಸ್ಥಾನ ಹಾಗೂ ತ್ರಿಶೂಲ್ ಮೊಯಿಲಿ 539 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ.


Be the first to comment on "ಬೆಂಜನಪದವು ಸರಕಾರಿ ಪಿಯು ಕಾಲೇಜು: 95.83% ಫಲಿತಾಂಶ"