ಬಂಟ್ವಾಳ: ಬಂಟ್ವಾಳ ಪುರಸಭಾ ಮಾಜಿ ಉಪಾಧ್ಯಕ್ಷ, ನಿಕಟಪೂರ್ವ ಸದಸ್ಯ ಮಹಮ್ಮದ್ ನಂದರಬೆಟ್ಟು (66) ಅಲ್ಪಕಾಲದ ಅಸೌಖ್ಯದ ಬಳಿಕ ಸೋಮವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅವರು ಹೊಂದಿದ್ದರು. ಬಂಟ್ವಾಳ ಪುರಸಭೆಗೆ ಮೂರು ಅವಧಿಗೆ ಸದಸ್ಯರಾಗಿ ಚುನಾಯಿತರಾಗಿದ್ದ ಅವರು, ಒಂದು ಬಾರಿ ಉಪಾಧ್ಯಕ್ಷರಾಗಿದ್ದರು. ನಂದರಬೆಟ್ಟು ಅನ್ಸಾರಿಯಾ ಇಸ್ಲಾಮಿಕ್ ಮದರಸ ಸ್ಥಾಪಕ ಅಧ್ಯಕ್ಷರಾಗಿದ್ದ ಅವರು ನಿರಂತರ 16 ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಸ್ಥಳೀಯವಾಗಿ ಹಲವು ಧಾರ್ಮಿಕ, ಸಾಮಾಜಿಕ, ರಾಜಕೀಯ ಸಂಘಟನೆಗಳಲ್ಲೂ ಅವರು ಸಕ್ರಿಯರಾಗಿದ್ದರು. ಕಾಲೇಜು ಹಂತದಲ್ಲಿ ಉತ್ತಮ ವಾಲಿಬಾಲ್ ಪಟುವೂ ಆಗಿದ್ದ ಅವರು, ರಾಷ್ಟ್ರೀಯ ಮಟ್ಟದ ಆಟಗಾರರಾಗಿ ಗುರುತಿಸಿಕೊಂಡಿದ್ದರು. ಸ್ಪೀಕರ್ ಯು.ಟಿ.ಖಾದರ್, ಮಾಜಿ ಸಚಿವ ಬಿ.ರಮಾನಾಥ ರೈ, ಎಸ್.ಡಿ.ಪಿ.ಐ. ಮುಖಂಡ, ಪುರಸಭೆ ಮಾಜಿ ಉಪಾಧ್ಯಕ್ಷ ಮುನೀಶ್ ಆಲಿ ಸಹಿತ ಗಣ್ಯರು ಮಹಮ್ಮದ್ ನಂದರಬೆಟ್ಟು ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಂಟ್ವಾಳ ಪುರಸಭೆ ಮಾಜಿ ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು ನಿಧನ"
Be the first to comment on "ಬಂಟ್ವಾಳ ಪುರಸಭೆ ಮಾಜಿ ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು ನಿಧನ"