ಬಂಟ್ವಾಳ: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ ಪಾಣೆಮಂಗಳೂರು ಆಲಡ್ಕದ ಎಸ್.ಎಸ್.ಹಾಲ್ ನಲ್ಲಿ ಮೇ 12ರಂದು ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಶನಿವಾರ ಏ.18ರಂದು ಸಂಜೆ 4ಕ್ಕೆ ಬಿ.ಸಿ.ರೋಡಿನ ಡಾ ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ. ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ರಚಿಸಲಾಗುವುದು. ಸಮ್ಮೇಳನದ ಯಶಸ್ಸಿಗೆ ಸಹಕರಿಸಬೇಕಾಗಿ ಬ್ಯಾರಿ ಸಾಹಿತ್ಯ ಪರಿಷತ್ ಪ್ರಧಾನ ಕಾರ್ಯದರ್ಶಿ ಲತೀಫ್ ನೇರಳಕಟ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.