ಬಂಟ್ವಾಳ

CRIME NEWS: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸರ ಕಳವು

ಬಂಟ್ವಾಳ: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ  ವೇಳೆ ಸುಮಾರು 18 ಗ್ರಾಮ್ ತೂಕದ ಚಿನ್ನದ ಸರ ಕಳವಾಗಿದೆ ಎಂದು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಮಹಿಳೆಯೊಬ್ಬರು ದೂರು ನೀಡಿದಂತೆ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ಸರಸ್ವತಿ ಎಂಬವರು ತನ್ನ ಮಗಳೊಂದಿಗೆ ಮಡಂತ್ಯಾರಿನಿಂದ ಪೊಳಲಿಗೆ ಹೋಗಲು ಧರ್ಮಸ್ಥಳ ದಿಂದ ಸ್ಟೇಟ್ ಬ್ಯಾಂಕಿಗೆ ಹೋಗುವ ಬಸ್ಸಿನಲ್ಲಿ ಏ.15ರಂದು ಬೆಳಗ್ಗೆ  ಸುಮಾರು 8.20ಕ್ಕೆ ಹತ್ತಿದ್ದರು. ಬಸ್ ನಲ್ಲಿ ಜನಸಂದಣಿ ಇದ್ದು, ಮಗಳು ಕುಳಿತಿದ್ದರೆ, ಮಹಿಳೆ ನಿಂತು ಪ್ರಯಾಣಿಸಿದ್ದರು. ಮಗಳೊಂದಿಗೆ ಬಿ.ಸಿ.ರೋಡಿನಲ್ಲಿ ಇಳಿಯುವ ವೇಳೆ ಸುಮಾರು 9 ಗಂಟೆಗೆ ಕುತ್ತಿಗೆ ನೋಡಿದ್ದು, ಈ ವೇಳೆ ಚಿನ್ನದ ಸರ ಇರಲಿಲ್ಲ. ಬಸ್ಸಿನಲ್ಲಿ ಹುಡುಕಾಡಿದರೂ ಸಿಗಲಿಲ್ಲ. ಯಾರೋ ಕಳ್ಳರು ಕುತ್ತಿಗೆಯಲ್ಲಿದ್ದ 18 ಗ್ರಾಂ ತೂಕದ ಚಿನ್ನದ ಸರವನ್ನು ಮಡಂತ್ಯಾರುನಿಂದ ಬಿ.ಸಿ ರೋಡ್ ಗೆ ಬರುವ ಸಮಯ ಬಸ್ಸಿನಲ್ಲಿ ಕಳ್ಳತನ ಮಾಡಿದ್ದಾಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ. ಕಳ್ಳತನವಾದ ಚಿನ್ನದ ಅಂದಾಜು ಮೌಲ್ಯ ಸುಮಾರು 2,50,000 ಆಗಬಹುದು ಎಂದು ಹೇಳಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.