ಬಂಟ್ವಾಳ: ಪಾಣೆಮಂಗಳೂರು ಸಮೀಪ ನಾಯ್ಲದ ಓಂ ಶ್ರೀ ಗೆಳೆಯರ ಬಳಗದ 20ನೇ ವಾರ್ಷಿಕ ಸಂಭ್ರಮ ಸಂಘದ ವಠಾರದಲ್ಲಿ ಏಪ್ರಿಲ್ 18ರಂದು ನಡೆಯಲಿದೆ.
ಈ ವಿಷಯವನ್ನು ಸಂಘದ ಮಾಜಿ ಅಧ್ಯಕ್ಷ ಕಿರಣ್ ಅಟ್ಲೂರು ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಬೆಳಗ್ಗೆ ಗಣಪತಿ ಹೋಮ, ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ 5.30ರಿಂದ ಸ್ಥಳೀಯರಿಂದ ಸಾಂಸ್ಕೃತಿಕ ಕಾರ್ಯಕ್ರಮ, 6.30ರಿಂದ ಕುಸಲ್ದ ಕುರ್ಲರಿ, ಬಳಿಕ 7.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ. ಬಳಿಕ ಓಂಕಾರ್ ಇವೆಂಟ್ಸ್ ಮತ್ತು ಎಂಟರ್ ಟೈನ್ ಮೆಂಟ್ ನಿಂದ ಓಂ ಶ್ರೀ ಮ್ಯೂಸಿಕಲ್ ನೈಟ್ ನಡೆಯಲಿದೆ. ಸಭಾ ಕಾರ್ಯಕ್ರಮದಲ್ಲಿ ಸೇವಾ ಕ್ಷೇತ್ರದಲ್ಲಿ ಅನಿಲ್ ದಾಸ್, ಕಲಾ ಕ್ಷೇತ್ರದಲ್ಲಿ ಮಹಮ್ಮದ್ ಯಾಸೀರ್, ಸಾಮಾಜಿ ಕ್ಷೇತ್ರದಲ್ಲಿ ಅಮ್ಮ ಸ್ವೀಟ್ಸ್ ನ ಜನಾರ್ದನ ಪೂಜಾರಿ ಮತ್ತು ಮಾಧ್ಯಮ ಕ್ಷೇತ್ರದಲ್ಲಿ ಪ್ರಶಾಂತ್ ಪುಂಜಾಲಕಟ್ಟೆ ಅವರನ್ನು ಗೌರವಿಸಿ ಸನ್ಮಾನಿಸಲಾಗುವುದು. ವೀರಮಾರುತಿ ವ್ಯಾಯಾಮ ಶಾಲೆಗೆ ಸಂಘ, ಸಂಸ್ಥೆ ನೆಲೆಯಲ್ಲಿ ಗೌರವಿಸಲಾಗುವುದು ಎಂದರು. ಸುದ್ದಿಗೋಷ್ಠಿಯಲ್ಲಿ ಗೌರವಾಧ್ಯಕ್ಷ ನಾಗೇಶ್ ಕುಲಾಲ್, ಅಧ್ಯಕ್ಷ ದಿನೇಶ್ ನೆಲ್ಲಿಗುಡ್ಡೆ, ಮಹಿಳಾ ಮಂಡಲ ಅಧ್ಯಕ್ಷೆ ನಳಿನಿ ಶುಭಕರ ಉಪಸ್ಥಿತರಿದ್ದರು.