ಬಂಟ್ವಾಳ

ಓಂ ಶ್ರೀ ಗೆಳೆಯರ ಬಳಗ 20ನೇ ವಾರ್ಷಿಕೋತ್ಸವ, ಸಾಧಕರಿಗೆ ಸನ್ಮಾನ

ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾಣೆಮಂಗಳೂರು ನಾಯಿಲದ ಓಂ ಶ್ರೀ ಗೆಳೆಯರ ಬಳಗ 20ನೇ ವಾರ್ಷಿಕೋತ್ಸವ ಶನಿವಾರ ಸಂಜೆ ಸಂಘದ ವಠಾರದಲ್ಲಿ ನಡೆಯಿತು

ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿ ಮಾತನಾಡಿ, ಉತ್ತಮ ರೀತಿಯಲ್ಲಿ ಸೇವೆಯನ್ನು ಮಾಡುತ್ತಾ ಬಂದಿರುವ ಸಂಘ ಓಂ ಶ್ರೀ ಗೆಳೆಯರ ಬಳಗಕ್ಕೆ ಅರ್ಹವಾಗಿಯೇ ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ ಎಂದರು.

ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಮಾತನಾಡಿ ಸಮಾಜದೊಂದಿಗೆ  ಸಂಘ ಜೀವಿಯಾಗಿ ಸಾಧನೆ ಮಾಡಿದರೆ, ಯಶಸ್ಸು ಸಾಧ್ಯವಾಗುತ್ತದೆ. ಸಂಸ್ಕೃತಿ, ಸಂಸ್ಕಾರ, ಸಮಾಜ ಮುಖಿ ಕಾರ್ಯಗಳಿಗೆ ಪ್ರೇರಣೆ ನೀಡುವ ಕಾರ್ಯಕ್ಕಾಗಿ ಹಿರಿಯರು ಸಂಘಗಳನ್ನು ರಚನೆ ಮಾಡಿದ್ದಾರೆ.  ಸೈದ್ದಾಂತಿಕ ವಿಚಾರಗಳಲ್ಲಿ ರಾಜಿಯಾಗದೆ ಸಾಮಾಜಿಕ ಸೇವೆಯನ್ನು ಮುಂದುವರಿಸಿ ಎಂದು ಶುಭ ಹಾರೈಸಿದರು.

ಜಾಹೀರಾತು

ಅಧ್ಯಕ್ಷತೆಯನ್ನು ಯುವ ಉದ್ಯಮಿ ಸತೀಶ್ ಕುಮಾರ್ ಕೆ. ವಹಿಸಿದ್ದರು. ಹಿರಿಯ ವಕೀಲರಾದ ಅಶ್ವನಿ ಕುಮಾರ್ ರೈ, ಬೂಡ ಅಧ್ಯಕ್ಷ ಬೇಬಿ ಕುಂದರ್, ಬಿಲ್ಲವ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಉದ್ಯಮಿಗಳಾದ  ಉಮೇಶ್ ಬೋಳಂತೂರು, ಶೈಲೇಶ್ ಕುಚ್ಚಿಗುಡ್ಡೆ, ಸುಧೀರ್ ರೈ, ಉಮೇಶ್ ನೆಲ್ಲಿಗುಡ್ಡೆ, ಚೈತ್ರೇಶ್ ಶೆಣೈ, ಕರುಣಾಕರ, ವಕೀಲರಾದ ಉಮೇಶ್ ಕುಮಾರ್ ವೈ, ಪ್ರದೀಪ್ ಎನ್.ಕೆ., ಸಂಘದ ಅಧ್ಯಕ್ಷ ದಿನೇಶ್ ನೆಲ್ಲಿಗುಡ್ಡೆ, ಗೌರವಾಧ್ಯಕ್ಷ ನಾಗೇಶ್ ಕುಲಾಲ್, ಮಹಿಳಾ ಮಂಡಲದ ಅಧ್ಯಕ್ಷೆ ನಳಿನಿ ಶುಭಕರ, ಮಾಜಿ ಅಧ್ಯಕ್ಷ ಕಿರಣ್ ಅಟ್ಲೂರು ಹಾಗೂ ಸದಸ್ಯರುಗಳು  ಉಪಸ್ಥಿತರಿದ್ದರು.

ಪ್ರತಿ ವರ್ಷದಂತೆ ವಾರ್ಷಿಕ ಸಂಭ್ರಮದ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಗುರುತಿಸಿ ಗೌರವ ನೀಡಿದ್ದು, ಸೇವಾ ಕ್ಷೇತ್ರದಲ್ಲಿ ಅನಿಲ್ ದಾಸ್, ಕಲಾ ಕ್ಷೇತ್ರದಲ್ಲಿ ಮಹಮ್ಮದ್ ಯಾಸೀರ್ ಕಲ್ಲಡ್ಕ, ಸಾಮಾಜಿಕ ಕ್ಷೇತ್ರದಲ್ಲಿ ಜನಾರ್ದನ ಪೂಜಾರಿ ಬೋಳಂಗಡಿ, ಮಾಧ್ಯಮ ಕ್ಷೇತ್ರದಲ್ಲಿ ಪ್ರಶಾಂತ್ ಪುಂಜಾಲಕಟ್ಟೆ ಅವರನ್ನು ಗೌರವಿಸಿದರು.

ಸಂಘದ ನಿಕಟಪೂರ್ವ ಅಧ್ಯಕ್ಷ ಕಿರಣ್ ಕುಮಾರ್ ಅಟ್ಲೂರು ಸ್ವಾಗತಿಸಿದರು. ಮಹಿಳಾ ಸಂಘದ ಕಾರ್ಯದರ್ಶಿ ಮೋಹಲತಾ ಹರೀಶ್ ವಂದಿಸಿದರು.ಎಚ್ಕೆ ನಯನಾಡು ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.