ಬಂಟ್ವಾಳ ತಾಲೂಕು ಮಟ್ಟದ ಬಸವೇಶ್ವರ ಜಯಂತಿ ಆಚರಣೆ

ತಾಲೂಕು ಮಟ್ಟದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಿ.ಸಿ.ರೋಡಿನ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಬಸವೇಶ್ವರ ಜಯಂತಿ ಆಚರಣೆ ನಡೆಯಿತು.

ಚುನಾವಣೆ ಉಪತಹಸೀಲ್ದಾರ್ ನವೀನ್ ಕುಮಾರ್ ಬೆಂಜನಪದವು ದೀಪ ಬೆಳಗಿಸಿ ಶುಭ ಹಾರೈಸಿದರು. ಈ ಸಂದರ್ಭ ಕೇಂದ್ರ ಸ್ಥಾನೀಯ ಉಪತಹಸೀಲ್ದಾರ್ ನರೇಂದ್ರನಾಥ್ ಮಿತ್ತೂರು ಮಾತನಾಡಿ

ಬಸವಣ್ಣನವರು ಸಾಮಾಜಿಕ ಕ್ರಾಂತಿಯ ಹರಿಕಾರರು. ಸಮಾನತೆಯ ಸಮಾಜದ ನಿರ್ಮಾಣಕ್ಕಾಗಿ ಇವರು ನಡೆಸಿದ ಹೋರಾಟ ಯಾವತ್ತೂ ಸ್ತುತ್ಯರ್ಹ. ಬಸವಣ್ಣವರ ದೂರದೃಷ್ಟಿ ಸಮಾಜದ ಎಲ್ಲಾ ಸ್ತರದ ಜನತೆಗೆ ಸಮಾನ ಅವಕಾಶಗಳನ್ನು ಒದಗಿಸಲು ಶ್ರಮಿಸಿತು. ವಚನ ಸಾಹಿತ್ಯದ ಮೂಲಕ ಎಲ್ಲಾ ವರ್ಗದ ಜನರು ಮುನ್ನೆಲೆಗೆ ಬರಲು ಸಾಧ್ಯವಾಯಿತು ಎಂದು ಹೇಳಿದರು.

ಜಾಹೀರಾತು

ಈ ಸಂದರ್ಭ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್ , ತಾಲೂಕು ಕಚೇರಿ ಸಿಬ್ಬಂದಿ, ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ತಾಲೂಕು ಆಡಳಿತ ಶಾಖೆಯ ವಿಷಯ ನಿರ್ವಾಹಕ ಸೀತಾರಾಮ ಕಮ್ಮಾಜೆ ಸ್ವಾಗತಿಸಿ ವಂದಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳ ತಾಲೂಕು ಮಟ್ಟದ ಬಸವೇಶ್ವರ ಜಯಂತಿ ಆಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*