ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ಯುವವಾಹಿನಿ ಅಂತರ್ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭ ಡೆನ್ನನ ಡೆನ್ನನ 2026 ನಡೆಯಿತು.
ಈ ಸಂದರ್ಭ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ ದಿಶಾ ಪೂಜಾರಿ ಅವರನ್ನು ಗೌರವಿಸಲಾಯಿತು.
ಯುವಸಿಂಚನ ಬಿಡುಗಡೆ:
ಇದೇ ಸಂದರ್ಭ ಯುವವಾಹಿನಿ ಮುಖವಾಣಿ ಯುವಸಿಂಚನ ಪತ್ರಿಕೆಯನ್ನು ಬಿಡುಗಡೆಗೊಳಿಸಿದ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ, ದೇಶದ ಸಾಂಸ್ಕೃತಿಕ ವೈಭವದ ಮಹತ್ವವಾದದ್ದು, ಯುವಜನತೆ ಭಾರತೀಯ ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದರು.
ಯುವಸಿಂಚನ ಪತ್ರಿಕೆ ಸಂಪಾದಕ ಹರೀಶ್ ವಿ ಪಚ್ಚನಾಡಿ ಹಾಗೂ ಸಂಪಾದಕ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ, ಯುವವಾಹಿನಿ ಸಂಸ್ಥೆ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸಮಾಜವನ್ನು ಒಂದುಗೂಡಿಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿರುವುದು ಅತ್ಯಂತ ಶ್ಲಾಘನೀಯ ಎಂದರು.
ಮಾಜಿ ಸಚಿವರಾದ ಬಿ ರಮಾನಾಥ ರೈ ಮಾತನಾಡಿ, ಬಿಲ್ಲವ ಸಮಾಜದ ಹೆಮ್ಮೆಯ ಪುತ್ರಿಯಾಗಿ ದಿಶಾ ಪೂಜಾರಿ ಸಾಧನೆ ಸಮಸ್ತ ಸಮಾಜಕ್ಕೆ ಹೆಮ್ಮೆ ತರುವಂತಾಗಿದೆ ಎಂದರು.
ಯುವವಾಹಿನಿ ಕೇಂದ್ರ ಸಮಿತಿಯು ದಿಶಾ ಪೂಜಾರಿ ಅವರಿಗೆ 25,000 ನಗದು ಪುರಸ್ಕಾರ ನೀಡಿ ಅಭಿನಂದಿಸಿತು. ಅಧ್ಯಕ್ಷತೆಯನ್ನು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ವಹಿಸಿದ್ದರು.
ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ಅಗ್ರಜ ಬಿಲ್ಡರ್ಸ ಮಾಲಕರಾದ ಸಂದೇಶ್ ಶೆಟ್ಟಿ, ಸೇವ್ ಲೈಫ್ ಚಾರಿಟಬಲ್ ಸಂಸ್ಥಾಪಕರಾದ ಅರ್ಜುನ್ ಭಂಡಾರ್ಕರ್, ಉದ್ಯಮಿಗಳಾದ ಪ್ರಿಯದರ್ಶಿನಿ ಸುನೀಲ್ ಬಜ್ಪೆ, ಮನೋಜ್ ಶರ್ಮ, ಗೋಪಾಲ್ ಮೂಲ್ಯ, ರಾಜಶೇಖರ್ ಕೋಟ್ಯಾನ್ ಪುತ್ತೂರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಕ್ರೀಡಾ ನಿರ್ದೇಶಕರಾದ ಶಂಕರ್ ಕೋಟ್ಯಾನ್ ಅವರು ದಿಶಾ ಅವರ ಸಾಧನೆಯನ್ನು ಸಭೆಗೆ ಪರಿಚಯಿಸಿದರು.
ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು, ಕಾರ್ಯದರ್ಶಿ ಮಧುಸೂದನ್ ಮದ್ವ, ಸಾಂಸ್ಕೃತಿಕ ನಿರ್ದೇಶಕ ಶೈಲೇಶ್ ಕುಚ್ಚಿಗುಡ್ಡೆ, ಹಾಗೂ ಕೇಂದ್ರ ಸಮಿತಿಯ ಸಾಂಸ್ಕೃತಿಕ ನಿರ್ದೇಶಕ ದಿನೇಶ್ ಸುವರ್ಣ ರಾಯಿ, ಪ್ರಧಾನ ಸಂಚಾಲಕರಾದ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಸಂಚಾಲಕರಾದ ಗೀತಾ ಜಗದೀಶ್, ಉದಯ ಮೇನಾಡು ಉಪಸ್ಥಿತರಿದ್ದರು.
ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ವಂದಿಸಿದರು. ರೇಣುಕಾ ಕಣಿಯೂರು ಕಾರ್ಯಕ್ರಮ ನಿರೂಪಿಸಿದರು.
| ಕಲೆಯಲ್ಲಿನ ಏಕಾಗ್ರತೆ ಮತ್ತು ಸಮರ್ಪಣಾ ಭಾವ ಸಾಧನೆಯ ಬೆನ್ನೆಲುಬು: ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ (more…)