ಬಂಟ್ವಾಳ

ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

ಬ್ಯಾರಿ ಸಾಹಿತ್ಯ ಪರಿಷತ್ ಬಂಟ್ವಾಳ ಇದರ ಸಹಯೋಗದೊಂದಿಗೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಮೇ.12 ರಂದು ಪಾಣೆಮಂಗಳೂರು ಸಮೀಪದ ಎಸ್ ಎಸ್ ಹಾಲ್ ನಲ್ಲಿ ನಡೆಯಲಿರುವ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ಬಿ.ಸಿ.ರೋಡಿನ ಡಾ ಬಿ.ಆರ್  ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್ ಯು ಎಚ್., ಸಮ್ಮೇಳನದ ರೂಪುರೇಷೆ ಹಾಗೂ ಸಿದ್ದತೆಗಳ ಬಗ್ಗೆ ಮಾಹಿತಿ ನೀಡಿದರು.

ಅಧ್ಯಕ್ಷತೆ ವಹಿಸಿದ್ದ  ಬ್ಯಾರಿ ಸಾಹಿತ್ಯ ಪರಿಷತ್ ಬಂಟ್ವಾಳ ಅಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ ಮಾತನಾಡಿ,  ಬ್ಯಾರಿ ಆಂದೋಲನ, ಅಕಾಡೆಮಿಗಾಗಿ ಶ್ರಮಿಸಿದ ನಾಯಕರು ಹಾಗೂ ಬಂಟ್ವಾಳ ತಾಲೂಕಿನ ನೇರಳಕಟ್ಟೆಯಲ್ಲಿ ನಡೆದ ಬ್ಯಾರಿ ಸಾಹಿತ್ಯ ಸಮ್ಮೇಳನವನ್ನು ನೆನಪಿಸಿಕೊಂಡರು,. ಮುಂದೆ ನಡೆಯುವ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಸರ್ವರ ಸಹಕಾರ ಕೋರಿದರು.

ಜಾಹೀರಾತು

ಬ್ಯಾರಿ ಸಾಹಿತ್ಯ ಪರಿಷತ್ ಬಂಟ್ವಾಳ ಸಂಚಾಲಕ ಪಿ.ಎ. ರಹೀಂ, ಕೋಶಾಧಿಕಾರಿ ಮುಹಮ್ಮದ್ ಸಾಗರ್, ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಪಿ.ಎಂ. ಅಶ್ರಫ್ ಪಾಣೆಮಂಗಳೂರು, ಕೋಶಾಧಿಕಾರಿ ಆನಿಯಾ ದರ್ಬಾರ್ ಹಂಝ ಬಸ್ತಿಕೋಡಿ  ಮೊದಲಾದವರು ಭಾಗವಹಿಸಿದ್ದರು.

 ಬ್ಯಾರಿ ಪ್ರಮುಖರಾದ ಯೂಸುಫ್ ಕರಂದಾಡಿ, ಮೂನಿಷ್ ಅಲಿ ಬಂಟ್ವಾಳ, ಹನೀಫ್ ಬಗ್ಗುಮೂಲೆ, ಅಬ್ದುಲ್ ಮಜೀದ್ ಕಡೆಗೋಳಿ, ಮಹಮ್ಮದ್ ನಂದಾವರ, ಇಬ್ರಾಹಿಂ ಕೈಲಾರ್, ಅಬೂಬಕರ್ ಅಮ್ಮುಂಜೆ, ಚಿಕ್ ಖಲೀಲ್ ಬಂಟ್ವಾಳ, ಪಿ.ಮಹಮ್ಮದ್ ಪಾಣೆಮಂಗಳೂರು, ಅಲ್ತಾಫ್ ಡೈಮಂಡ್, ಉಮರ್ ಮಂಚಿ, ಮುಹಮ್ಮದ್ ಸುರಿಬೈಲು, ಯು.ಮುಸ್ತಫಾ ಆಲಡ್ಕ, ಹನೀಫ್ ನಂದರಬೆಟ್ಟು ಮೊದಲಾದವರು ವಿವಿಧ ಸಲಹೆ ನೀಡಿದರು.  ಬ್ಯಾರಿ ಸಾಹಿತ್ಯ ಪರಿಷತ್ ಪ್ರಧಾನ ಕಾರ್ಯದರ್ಶಿ ಲತೀಫ್ ನೇರಳಕಟ್ಟೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯ ಅಬೂಬಕ್ಕರ್ ಅನಿಲಕಟ್ಟೆ ವಂದಿಸಿದರು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.