ವಾಕಿಂಗ್ ಮಾಡುತ್ತಿದ್ದ ವೇಳೆ ಕುಸಿದುಬಿದ್ದು ಕೆಎಸ್ಸಾರ್ಟಿಸಿ ಚಾಲಕರೋರ್ವರು ಸಾವನ್ನಪ್ಪಿದ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಅವರ ಭಾವ ಸದ್ದಾಂ ಹುಸೇನ್ ಎಂಬವರು ನೀಡಿದ ದೂರಿನಂತೆ, ಲಾಡ್ಲೇ ಪಟೇಲ್ ಮೃತಪಟ್ಟವರು.
ಲಾಡ್ಲೇಪಟೇಲ್ ಅವರು ಸುಮಾರು 16 ವರ್ಷಗಳಿಂದ ಕೆಎಸ್ಸಾರ್ಟಿಸಿ ಬಿ.ಸಿ.ರೋಡ್ ಡಿಪೋದಲ್ಲಿ ಚಾಲಕರಾಗಿ ಕರ್ತವ್ಯ ಸಲ್ಲಿಸುತ್ತಿದ್ದರು. ಏ.18ರಂದು ಬೆಳಗ್ಗೆ ಕರ್ತವ್ಯ ಸಲ್ಲಿಸಿ ಡಿಪೋದ ವಿಶ್ರಾಂತಿ ಗೃಹದಲ್ಲಿ ವಿಶ್ರಾಂತಿ ಪಡೆದು, ಸಂಜೆ ಸುಮಾರು 7.15ಕ್ಕೆ ವಾಕಿಂಗ್ ಮಾಡುತ್ತಿದ್ದ ವೇಳೆ ಕುಸಿದುಬಿದ್ದಿದ್ದಾರೆ. ಕೂಡಲೇ ಚಿಕಿತ್ಸೆಗೆ ತುಂಬೆಯ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅದೇ ದಿನ ರಾತ್ರಿ ಸಾವನ್ನಪ್ಪಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ.
| ಕಲೆಯಲ್ಲಿನ ಏಕಾಗ್ರತೆ ಮತ್ತು ಸಮರ್ಪಣಾ ಭಾವ ಸಾಧನೆಯ ಬೆನ್ನೆಲುಬು: ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ (more…)