ಫರಂಗಿಪೇಟೆ

ನೆತ್ತರಕೆರೆ :ಸರಕಾರಿ ಶಾಲಾ ನೂತನ ಕೊಠಡಿ ನಿರ್ಮಾಣಕ್ಕೆ ಶಿಲಾನ್ಯಾಸ

ಬಂಟ್ವಾಳ : ತಾಲೂಕಿನ ಕಳ್ಳಿಗೆ ಗ್ರಾಮದ ನೆತ್ತರಕೆರೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ, ದಿ.ವಸಂತಿ ವಿಠ್ಠಲ ಶೆಟ್ಟಿ ಮುಂಡಾಜೆಗುತ್ತು ಸ್ಮರಣಾರ್ಥ ಅವರ ಮಕ್ಕಳು ಕೊಡುಗೆಯಾಗಿ ನೀಡುವ ನೂತನ ನಾಲ್ಕು ಕೊಠಡಿ ನಿರ್ಮಾಣಕ್ಕೆ ಕುಟುಂಬಸ್ಥರ ಪರವಾಗಿ ಪ್ರಗತಿಪರ ಕೃಷಿಕ ಜ್ಯೋತಿಂದ್ರ ಶೆಟ್ಟಿ ಮುಂಡಾಜೆಗುತ್ತು ಶಿಲಾನ್ಯಾಸ ನೆರವೇರಿಸಿದರು.

ವೇದಮೂರ್ತಿ ಗಣೇಶ ಭಟ್ ಸುಜೀರು ಅವರು ಭೂಮಿ ಪೂಜೆಯ ವೈದಿಕ ವಿಧಿ ವಿದಾನ ನೆರವೇರಿಸಿದರು, ಪುದು ರಾಧಾ ಸುರಭಿ ಗೋ ಮಂದಿರದ ಭಕ್ತಿ ಭೂಷಣ್ ಪ್ರಭುಜೀ ಉಪಸ್ಥಿತರಿದ್ದರು.

ಈ ಸಂದರ್ಭ ದೇವಂದಬೆಟ್ಟು ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ಮಾಜಿ ಆಡಳಿತ ಮುಕ್ತೇಸರ ನವೀನಚಂದ್ರ ಶೆಟ್ಟಿ ಮುಂಡಾಜೆಗುತ್ತು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಾಮೋದರ ನೆತ್ತರಕೆರೆ, ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷರಾದ ಬಿ ಸುರೇಶ ಭಂಡಾರಿ ಅರ್ಬಿ, ಭಾಸ್ಕರ ಕುಲಾಲ್, ಚಂದ್ರಹಾಸ ನೆತ್ತರಕೆರೆ, ಪುದು ಗ್ರಾ ಪಂ ಸದಸ್ಯರಾದ ಪಿ ಸುಬ್ರಮಣ್ಯ ರಾವ್, ಪದ್ಮನಾಭ ಶೆಟ್ಟಿ ಪುಂಚಮೆ, ಕಟ್ಟಡದ ಇಂಜಿನಿಯರ್ ಸುಧೀರ್ ಕುಮಾರ್ ಶೆಟ್ಟಿ,, ಪುದು ಗ್ರಾ ಪಂ  ಮಾಜಿ ಸದಸ್ಯ ಸಂತೋಷ್ ಕುಮಾರ್, ಶಾಲಾ ಮುಖ್ಯ ಶಿಕ್ಷಕಿ ಸಿಲ್ವಿಯಾ ಬ್ರೇಗ್ಸ್ , ಸಹ ಶಿಕ್ಷಕಿಯರು, ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಮತ್ತಿತರರು ಇದ್ದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.