ಭಜನಾ ಮಂಗಳೋತ್ಸವ, ಧಾರ್ಮಿಕ ಸಭೆ, ಸಾಧಕರಿಗೆ ಸನ್ಮಾನ

ಬಂಟ್ವಾಳ ತಾ. ಕುಡಂಬೆಟ್ಟು ಗ್ರಾಮದ ಹಲೆಪ್ಪಾಡಿ ಶ್ರೀ ರಾಮಾಂಜನೇಯ ಭಜನ ಮಂದಿರದ ವಾರ್ಷಿಕೋತ್ಸವ ಪ್ರಯುಕ್ತ ಭಜನ ಮಂಗಳೋತ್ಸವ ಹಾಗೂ  ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.  

ಬೆಳಗ್ಗೆ ಭಜನ ಮಂಗಳೋತ್ಸವಕ್ಕೆ ಚಾಲನೆ, ಗಣಯಾಗ, ಮಧ್ಯಾಹ್ನ ಮಹಾಪೂಜೆ, ಸಂಜೆ ಭಜನ ಮಂಗಳ ನಡೆಯಿತು. ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ವಾಮದಪದವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಪಿಲಿಂಗಾಲು ಅಧ್ಯಕ್ಷತೆ ವಹಿಸಿ ಮಾತನಾಡಿ, ಯುವ ಜನತೆ ಭಜನ ಮಂದಿರದಲ್ಲಿ ತೊಡಗಿಸಿಕೊಳ್ಳುವ ಮೂಲಕ ಆಧ್ಯಾತ್ಮಿಕ, ಧಾರ್ಮಿಕ ಚಿಂತನೆಯ ಅರಿವು ಉಂಟಾಗುತ್ತದೆ. ಸಮಾಜದಲ್ಲಿ ಧರ್ಮ ಜಾಗೃತಿಯಾಗುವುದರಿಂದ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ ಶ್ರೀ ರಾಮಾಂಜನೇಯ ಭಜನ ಮಂದಿರದ ಕಾರ್ಯ ಅಭಿನಂದನೀಯ ಎಂದು ಹೇಳಿದರು.

ಭಜನ ಸಂಕೀರ್ತನಕಾರ ನವೀನ್ ಶೆಟ್ಟಿ ಕಕ್ಕಿಬೆಟ್ಟು ಅವರು ಮಾತನಾಡಿ, ನಗರ ಭಜನೆ ಮಾಡುವುದರಿಂದ ಸಮಾಜಕ್ಕೆ ಒಳಿತಾಗುತ್ತದೆ. ದೇವರನ್ನು ಒಲಿಸುವ ಸುಲಭ ಮಾರ್ಗ ಭಜನೆಯಿಂದ ಸಾಧ್ಯ. ಭಜನೆಯಿಂದ ಮಾನಸಿಕ ನೆಮ್ಮದಿ ಪ್ರಾಪ್ತಿಯಾಗುತ್ತದೆ  ಎಂದು ಹೇಳಿದರು.

ಜಾಹೀರಾತು

ರಂಗಭೂಮಿ ಕಲಾವಿದ ರತ್ನದೇವ್ ಪುಂಜಾಲಕಟ್ಟೆ ಅವರು ಮಾತನಾಡಿ, ಶ್ರೀ ರಾಮನ ಆದರ್ಶ, ಹನುಮಂತನ ಸ್ವಾಮಿ ನಿಷ್ಠೆ, ಭಕ್ತಿ ನಮಗೆಲ್ಲ ಆದರ್ಶವಾಗಿದೆ ಎಂದರು. ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾನ ಸಮಿತಿ ಅಧ್ಯಕ್ಷ ರಾಘವೇಂದ್ರ ಪೂಜಾರಿ, ನಾಟಕಕಾರ, ಚಲನಚಿತ್ರ ನಿರ್ದೇಶಕ ರಾಘವೇಂದ್ರ ಕಾರಂತ ಮೊಗರ್ನಾಡು, ಪ್ರಗತಿಪರ ಕೃಷಿಕ ಗಂಗಾಧರ ಮುಗೇರ, ಶ್ರೀ ಕ್ಷೇ. ಧ.ಗ್ರಾ.ಯೋಜನೆ ಸೇವಾ ಪ್ರತಿನಿಧಿ ಮೋಹನದಾಸ ಗಟ್ಟಿ, ಸಮಿತಿ ಗೌರವಾಧ್ಯಕ್ಷ ಚೇತನ್ ಕುಮಾರ್ ಕುದ್ಕಂದೋಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.  ಸಮಿತಿ ಕಾರ್ಯಾಧ್ಯಕ್ಷ ಡಾ.ರಾಮಕೃಷ್ಣ ಎಸ್. ಸನಂಗುಳಿ,ಪ್ರ.ಕಾರ್ಯದರ್ಶಿ ವಿನೋದ್ ಪೂಜಾರಿ ಹಲೆಪ್ಪಾಡಿ, ಭಜನ ಮಂಡಳಿ ಪ್ರಮುಖರಾದ ಕೀರ್ತನ್ ಕುಮಾರ್, ಸಂಧ್ಯಾ ಆರ್.ಕೋರ್ನಾಯ,ಪ್ರಶಾಂತ್ ದೇವಾಡಿಗ, ಪುನೀತ್ ಹಲೆಪ್ಪಾಡಿ, ಶಿವ ಪ್ರಸಾದ್ ಪುಣ್ಕೆದಡಿ, ದೀಪಾ, ಶ್ರೇಯಾ,ಪೂಜಾ ಡಿ.ಕೆ. ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನಾಟಿ ವೈದ್ಯೆ ವೆಂಕಮ್ಮ ಪೂಜಾರ್ತಿ ಕಂಗಿತ್ಲು ಹಾಗೂ ಭಜನ ಸಂಕೀರ್ತನಕಾರ ನವೀನ್ ಶೆಟ್ಟಿ ಕಕ್ಕಿಬೆಟ್ಟು ಅವರನ್ನು ಸಮ್ಮಾನಿಸಲಾಯಿತು.  ಭಜನ ಮಂದಿರದ ಅಧ್ಯಕ್ಷ ಕಿರಣ್ ಕೋಟ್ಯಾನ್ ಅವರು  ಸ್ವಾಗತಿಸಿದರು. ಸತೀಶ್ ಕರ್ಕೇರಾ ಕಯ್ಯಬೆ ಅವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ರಾತ್ರಿ ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ,ಅನ್ನ ಸಂತರ್ಪಣೆ , ಪುಂಜಾಲಕಟ್ಟೆ ತಾಂಬೂಲ ಕಲಾವಿದರಿಂದ ಎಲ್ಲೆ ದಾದ ಏರೆಗ್ ಗೊತ್ತು ತುಳು ನಾಟಕ ಪ್ರದರ್ಶನ ನಡೆಯಿತು.  

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಭಜನಾ ಮಂಗಳೋತ್ಸವ, ಧಾರ್ಮಿಕ ಸಭೆ, ಸಾಧಕರಿಗೆ ಸನ್ಮಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*