ಪ್ರಮುಖ ಸುದ್ದಿಗಳು

ಸರಕಾರಿ ಪದವಿಪೂರ್ವ ಕಾಲೇಜುಗಳ ಸಾಧಕರ ಶ್ಲಾಘಿಸಿದ ಜಿಲ್ಲಾಧಿಕಾರಿ

| ದ್ವಿತೀಯ ಪಿಯುಸಿ: ಸರಕಾರಿ ಕಾಲೇಜುಗಳ ಸಾಧಕರಿಗೆ ಸನ್ಮಾನ

ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ   ಅತೀ ಹೆಚ್ಚು ಅಂಕ ಗಳಿಸಿ ಸಾಧನೆಗೈದ  ಜಿಲ್ಲೆಯ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ  ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸನ್ಮಾನಿಸಲಾಯಿತು.

ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಮಾತನಾಡಿ, ಸರ್ಕಾರಿ ಕಾಲೇಜುಗಳಲ್ಲಿ ಕಲಿತ ವಿದ್ಯಾರ್ಥಿಗಳು ಉತ್ತಮ ಸಾಧನೆಗೈಯುವ ಮೂಲಕ ತಮ್ಮ ಪೋಷಕರಿಗೆ ಮತ್ತು  ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಮಕ್ಕಳ ಸಾಧನೆ ಹಿಂದೆ  ಪೋಷಕರ ಕೊಡುಗೆ ಇದೆ. ವಿದ್ಯಾರ್ಥಿಗಳು ವಿದ್ಯೆಯ  ಹಿಂದೆ ಹೋಗಬೇಕು, ಹಣದ ಹಿಂದೆ ಹೋಗಬಾರದು. ವಿದ್ಯೆಯ ಹಿಂದೆ ಹೋದರೆ ಹಣ  ತಾನಾಗಿಯೇ ಬರುತ್ತದೆ ಎಂದರು.  ಸರಕಾರಿ ಕಾಲೇಜುಗಳ ಸೀಮಿತ ಸವಲತ್ತುಗಳ ಮಧ್ಯೆ ವಿದ್ಯಾರ್ಥಿಗಳು  ಸಾಧನೆ ಗೈದಿರುವುದು ಶ್ಲಾಘನೀಯ ಎಂದು ಅವರು ಹೇಳಿದರು.

ಜಾಹೀರಾತು

ಸನ್ಮಾನಿತ ವಿದ್ಯಾರ್ಥಿಗಳ ವಿವರ: ಕಲಾ ವಿಭಾಗದಲ್ಲಿ ಪುತ್ತೂರು ಸರಕಾರಿ ಪದವಿ ಪೂರ್ವ ಕಾಲೇಜಿನ  ವಿದ್ಯಾರ್ಥಿ   ಸುಶ್ಮಿತಾ – 582 ಅಂಕ ವಾಣಿಜ್ಯ  ವಿಭಾಗದಲ್ಲಿ  ಪುತ್ತೂರು ಸರಕಾರಿ ಪದವಿ ಪೂರ್ವ ಕಾಲೇಜಿನ  ವಿದ್ಯಾರ್ಥಿ ನೇಹಾ ಎಂ. ಡಿ – 591,  ವಾಮದಪದವು ಸರಕಾರಿ ಪದವಿ ಪೂರ್ವ ಕಾಲೇಜಿನ   ದಕ್ಷಾ  – 591,   ಬಲ್ಮಠ  ಸರಕಾರಿ ಪದವಿ ಪೂರ್ವ ಕಾಲೇಜಿನ ಮಾನ್ವಿಕಾ – 589  ಅಂಕ
    ವಿಜ್ಞಾನ ವಿಭಾಗದಲ್ಲಿ ಪುತ್ತೂರು ಸರಕಾರಿ ಪದವಿ ಪೂರ್ವ ಕಾಲೇಜಿನ  ಪವಿತ್ರ ಎಸ್. ಪಿ – 586,  ಪುಂಜಾಲಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ  ಸಾತ್ವಿ ಬಾಳಿಗ- 583
ಪ್ರಾಂಶುಪಾಲರಿಗೆ ಸನ್ಮಾನ
ಇದೇ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ  ಪಡೆದ ಜಿಲ್ಲೆಯ  5 ಸರಕಾರಿ ಪದವಿಪೂರ್ವ ಕಾಲೇಜು  ಪ್ರಾಂಶುಪಾಲರನ್ನು  ಜಿಲ್ಲಾಧಿಕಾರಿಗಳು ಸನ್ಮಾನಿಸಿದರ.  ಬೆಳ್ಳಾರೆ, ಗುತ್ತಿಗಾರು, ಕೊಯ್ಯೂರು, ಐವರ್ನಾಡು ಮತ್ತು ನಾಲ್ಯಪದವು   ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರನ್ನು ಸನ್ಮಾನಿಸಲಾಯಿತು. ಈ ಸಂದರ್ಭ  ಅಪರ ಜಿಲ್ಲಾಧಿಕಾರಿ ರಾಜು ಕೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ರಾಜೇಶ್ವರಿ ಮತ್ತಿತ್ತರರು ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.