ಸುದ್ದಿಗಳು

ಮಾದಕ ವಸ್ತು ವ್ಯಸನಿಗಳಿಗೆ ಹೆಚ್.ಐ.ವಿ ತಪಾಸಣೆ: ಜಿಲ್ಲಾಧಿಕಾರಿ ಸೂಚನೆ

ಮಾದಕ ವಸ್ತು ವ್ಯಸನಿಗಳಿಗೆ ಹೆಚ್.ಐ.ವಿ ರೋಗದ ಬಗ್ಗೆ ಪರೀಕ್ಷೆ ನಡೆಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಸೂಚಿಸಿದ್ದಾರೆ.

ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಿಷನ್  ಏಡ್ಸ್ ಸುರಕ್ಷಾ ಅಭಿಯಾನದ ಗುರಿಗಳನ್ನು ಜಿಲ್ಲಾಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನನಗೊಳಿಸುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.  ಜಿಲ್ಲೆಯಲ್ಲಿ ಡ್ರಗ್ಸ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಪತ್ತೆಯಾಗಿದ್ದು, ಈ ನಿಟ್ಟಿನಲ್ಲಿ ಮಿಷನ್  ಏಡ್ಸ್ ಅಭಿಯಾನದಡಿ  ಅಗತ್ಯ ಕ್ರಮ ಕೈಗೊಳ್ಳಲು ಅವರು ಸೂಚಿಸಿದರು.
ಜಿಲ್ಲೆಯ ಎಲ್ಲಾ ಖಾಸಗಿ ಕ್ಲಿನಿಕ್, ನಸಿರ್ಂಗ್ ಹೋಂ, ಆಸ್ಪತ್ರೆಗಳು ಹೆಚ್.ಐ.ವಿ ಪ್ರಕರಣಗಳ ಬಗ್ಗೆ   ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು. ಪ್ರಮುಖ ಜನಸಂದಣಿ  ಘಟಕ, ಕೈಗಾರಿಕೆಗಳು,  ವಲಸೆ ಕಾರ್ಮಿಕರಲ್ಲಿ ಹೆಚ್.ಐ.ವಿ  ತಪಾಸಣೆ ಬಗ್ಗೆ ಸಹಕರಿಸಲು ಸಂಬಂಧಿಸಿದ ಇಲಾಖೆಗೆ ಸೂಚಿಸಲಾಗುವುದು ಎಂದು  ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ  ಡಾ. ಖತೀಜಾ ದಿಲ್‍ಶಾದ್  ಮಾತನಾಡಿ, ಮಿಷನ್  ಏಡ್ಸ್ ಸುರಕ್ಷಾ ಅಭಿಯಾನದಡಿ,  ಹೆಚ್.ಐ.ವಿ ಬಾಧಿತರ ಪೈಕಿ ಶೇಕಡ 95 ರಷ್ಟು ಮಂದಿಗೆ ತಮ್ಮ  ಹೆಚ್.ಐ.ವಿ  ಸ್ಥಿತಿಯ ಬಗ್ಗೆ ಅರಿವು ಮೂಡಿಸುವುದು, ಸೂಕ್ತ ಚಿಕಿತ್ಸೆ ಪಡೆದು ಮತ್ತು ವೈರಸ್ ನಿಯಂತ್ರಿಸುವುದು ಆದ್ಯತೆಯಾಗಿರುತ್ತದೆ.  ಜಿಲ್ಲೆಯಲ್ಲಿ ಮಾರ್ಚ್ ಅಂತ್ಯದವರೆಗೆ ಹೆಚ್.ಐ.ವಿ ಭಾಧಿತರಲ್ಲಿ ಶೇ. 85.23 ರಷ್ಟು ಮಂದಿ ಚಿಕಿತ್ಸೆ ಪಡೆದಿರುತ್ತಾರೆ ಎಂದರು.

ಜಾಹೀರಾತು

ಜಿಲ್ಲೆಯಲ್ಲಿ 21 ಕೌನ್ಸಿಲಿಂಗ್ ಮತ್ತು ಪರೀಕ್ಷಾ ಕೇಂದ್ರಗಳು, 9 ಎ.ಆರ್.ಟಿ ಕೇಂದ್ರಗಳು  ಕಾರ್ಯನಿರ್ವಹಿಸುತ್ತಿದೆ. ಪ್ರಸ್ತುತ ಜಿಲ್ಲೆಯಲ್ಲಿ  4663 ಹೆಚ್.ಐ.ವಿ   ಸಕ್ರಿಯ  ಪ್ರಕರಣಗಳು   ಇವೆ. ಕಳೆದ ವರ್ಷ ಜಿಲ್ಲೆಯಲ್ಲಿ 84893  ಹೆಚ್.ಐ.ವಿ ಪರೀಕ್ಷೆ  ಮಾಡಲಾಗಿದ್ದು, ಈ ಪೈಕಿ 293  ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಇದುವರೆಗೆ ಜಿಲ್ಲೆಯಲ್ಲಿ ಹೆಚ್.ಐ.ವಿ ಯಿಂದ 2972 ಮರಣ ಪ್ರಕರಣಗಳು ವರದಿಯಾಗಿದೆ ಎಂದು ತಿಳಿಸಿದರು.  
    ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಜೈಬುನ್ನೀಸ, ದ.ಕ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ  ಜಯಲಕ್ಷ್ಮಿ ರಾಯಕೋಡ್ , ಅಪರ ಜಿಲ್ಲಾಧಿಕಾರಿ ರಾಜು ಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಆರ್. ತಿಮ್ಮಯ್ಯ,  ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.