ಬಂಟ್ವಾಳ: ಶಂಭೂರಿನ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಈ ಬಾರಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ.
ಪರೀಕ್ಷೆಗೆ ಹಾಜರಾದ 77 ವಿದ್ಯಾರ್ಥಿಗಳಲ್ಲಿ 77 ವಿದ್ಯಾರ್ಥಿಗಳೂ ಉತ್ತೀರ್ಣರಾಗುವ ಮೂಲಕ ಆಂಗ್ಲ ವಿಭಾಗದಲ್ಲಿ ಸತತ ಒಂಭತ್ತನೇ ಬಾರಿ ಕನ್ನಡ ಮಾಧ್ಯಮದಲ್ಲಿ ಪ್ರಥಮ ಬಾರಿಗೆ 100 ಶೇ. ಫಲಿತಾಂಶ ದಾಖಲಿಸಿದೆ. ಪ್ರತಿ ಬಾರಿಯಂತೆ ಈ ಬಾರಿಯೂ ಗುಣಾತ್ಮಕ ಫಲಿತಾಂಶದಲ್ಲಿ ಎ ಗ್ರೇಡ್ ಪಡೆದಿರುತ್ತದೆ. ವಿದ್ಯಾರ್ಥಿಗಳಾದ ಮಾನ್ಯಶ್ರೀ 607 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನಿ, ಕೇತನ್ 602 ಅಂಕಗಳೊಂದಿಗೆ ದ್ವಿತೀಯ ಸ್ಥಾನಿಯಾಗಿರುತ್ತಾನೆ. 4 ವಿದ್ಯಾರ್ಥಿಗಳು ಎ ಪ್ಲಸ್, 24 ವಿದ್ಯಾರ್ಥಿಗಳು ಎ ಶ್ರೇಣಿ ಪಡೆದಿರುತ್ತಾರೆ. ಈ ಸಾಧನೆಗೆ ಕಾರಣಕರ್ತರಾದ ವಿದ್ಯಾರ್ಥಿಗಳು, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದವನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಕಾರ್ಯಾಧ್ಯಕ್ಷರಾದ ಬೊಂಡಾಲ ಸಚ್ಚಿದಾನಂದ ಶೆಟ್ಟಿಯವರು ಅಭಿನಂದಿಸಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬೊಂಡಾಲ ಸರಕಾರಿ ಹೈಸ್ಕೂಲ್ ಶೇ.100 ಫಲಿತಾಂಶ"
Be the first to comment on "ಬೊಂಡಾಲ ಸರಕಾರಿ ಹೈಸ್ಕೂಲ್ ಶೇ.100 ಫಲಿತಾಂಶ"